ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಡ್ಮಿಂಟನ್: ಪ್ರಿಯಾಂಶು ರಾಜಾವತ್‌ ಸೆಮಿಫೈನಲ್‌ಗೆ

Published 1 ಡಿಸೆಂಬರ್ 2023, 22:47 IST
Last Updated 1 ಡಿಸೆಂಬರ್ 2023, 22:47 IST
ಅಕ್ಷರ ಗಾತ್ರ

ಲಖನೌ: ಭಾರತದ ಯುವ ಆಟಗಾರ ಪ್ರಿಯಾಂಶು ರಾಜಾವತ್‌, ಸೈಯ್ಯದ್ ಮೋದಿ ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಶುಕ್ರವಾರ ಇಂಡೊನೇಷ್ಯಾದ ಅಲ್ವಿ ಫರ್ಹಾನ್ ಅವರನ್ನು ಸೋಲಿಸಿ ಪುರುಷರ ಸಿಂಗಲ್ಸ್ ಸೆಮಿಫೈನಲ್ ತಲುಪಿದರು.

ಮಧ್ಯಪ್ರದೇಶದ 21 ವರ್ಷದ ಆಟಗಾರ ಪ್ರಿಯಾಂಶು ಕ್ವಾರ್ಟರ್‌ಫೈನಲ್‌ನಲ್ಲಿ 21–15, 21–16 ರಿಂದ ಪರ್ಹಾನ್ ಮೇಲೆ ಗೆಲುವನ್ನು ದಾಖಲಿಸಿದರು. ಗೆಲುವಿಗೆ ಅವರು 49 ನಿಮಿಷ ತೆಗೆದುಕೊಂಡರು.

ಬಿಡಬ್ಲ್ಯುಎಫ್‌ ವಿಶ್ವ ಟೂರ್ ಸೂಪರ್‌ 300 ಮಟ್ಟದ ಈ ಟೂರ್ನಿ ಯಲ್ಲಿ ಪ್ರಿಯಾಂಶು ತಮ್ಮ ಮುಂದಿನ ಪಂದ್ಯದಲ್ಲಿ ಚೀನಾ ತೈಪೆಯ ಚೀ ಯು ಜೆನ್ ಅವರನ್ನು ಎದುರಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT