ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಪಿಬಿಎಲ್‌: 10ರಂದು ತಂಡಗಳ ಹರಾಜು

Published 3 ಜೂನ್ 2023, 16:22 IST
Last Updated 3 ಜೂನ್ 2023, 16:22 IST
ಅಕ್ಷರ ಗಾತ್ರ

ಬೆಂಗಳೂರು: ಎರಡನೇ ಆವೃತ್ತಿಯ ಗ್ರ್ಯಾನ್‌ಪ್ರಿ ಬ್ಯಾಡ್ಮಿಂಟನ್‌ ಲೀಗ್‌ನ (ಜಿಪಿಬಿಎಲ್‌) ತಂಡಗಳ ಹರಾಜು ಪ್ರಕ್ರಿಯೆ ಜೂನ್‌ 10ರಂದು ಇಲ್ಲಿ ನಡೆಯಲಿದೆ.

ಕಳೆದ ವರ್ಷ ನಡೆದಿದ್ದ ಮೊದಲ ಆವೃತ್ತಿಯಲ್ಲಿ ಕರ್ನಾಟಕದ ಎಂಟು ತಂಡಗಳು ಭಾಗವಹಿಸಿದ್ದವು. ಈ ಬಾರಿ 10 ತಂಡಗಳು ಭಾಗವಹಿಸಲಿವೆ. ಬೆಂಗಳೂರು, ಚೆನ್ನೈ, ಹೈದರಾಬಾದ್‌, ಕೇರಳ, ಮುಂಬೈ, ಪುಣೆ, ಅಹಮದಾಬಾದ್‌, ದೆಹಲಿ, ಲಖನೌ ಮತ್ತು ಒಡಿಶಾ ತಂಡಗಳಿಗಾಗಿ ಹರಾಜು ನಡೆಯಲಿದೆ ಎಂದು ಲೀಗ್‌ನ ಕಮಿಷನರ್‌ ಪ್ರಶಾಂತ್‌ ರೆಡ್ಡಿ ತಿಳಿಸಿದ್ದಾರೆ.‌

ಸ್ಥಳೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಈ ಲೀಗ್‌ನ ಉದ್ದೇಶವಾಗಿದೆ. ಜುಲೈ 22ರಂದು ಆಟಗಾರರ ಹರಾಜು ನಡೆಯಲಿದೆ. ಈ ಬಾರಿ ಭಾರತ ಸೇರಿದಂತೆ 25 ದೇಶಗಳಿಂದ ಆಟಗಾರರು ಭಾಗವಹಿಸುವ ನಿರೀಕ್ಷೆ ಇದೆ. 10 ತಂಡಗಳಲ್ಲಿ ಸ್ಥಾನ ಪಡೆಯಲು ಭಾರತದ 350 ಹಾಗೂ 52 ಅಂತರರಾಷ್ಟ್ರೀಯ ಆಟಗಾರರು ಸ್ಪರ್ಧೆಯಲ್ಲಿದ್ದಾರೆ ಎಂದರು.

ಎರಡನೇ ಆವೃತ್ತಿಯ ಗ್ರ್ಯಾನ್‌ಪ್ರಿ ಬ್ಯಾಡ್ಮಿಂಟನ್‌ ಲೀಗ್‌ ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT