ಜೀವಾಂಜಿ ಅವರ ಕೋಚ್ ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತರಾದ ಎನ್. ರಮೇಶ್ ಅವರಿಗೂ ₹10 ಲಕ್ಷ ಬಹುಮಾನವನ್ನು ಸಿಎಂ ಘೋಷಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ವಿಶ್ವ ಚಾಂಪಿಯನ್ ದೀಪ್ತಿ ಜೀವಾಂಜಿ ಅವರು ಪ್ಯಾರಾಲಿಂಪಿಕ್ಸ್‌ನ ಮಹಿಳೆಯರ 400 ಮೀಟರ್ ಓಟದ ಟಿ20 ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
ತೆಲಂಗಾಣದ ವಾರಂಗಲ್ ಜಿಲ್ಲೆಯ ಕಲ್ಲೆಡಾ ಗ್ರಾಮದ ಕೂಲಿ ಕಾರ್ಮಿಕ ಕುಟುಂಬದ ದೀಪ್ತಿ, ಏಷ್ಯನ್ ಪ್ಯಾರಾ ಕ್ರೀಡಾಕೂಟದ 400 ಮೀಟರ್ ಓಟದಲ್ಲೂ ಚಿನ್ನ ಗೆದ್ದಿದ್ದರು.