ಚೀನಾ, ಅಮೆರಿಕ, ಸ್ಪೇನ್, ಜರ್ಮನಿ, ಇಟಲಿ, ಇಂಗ್ಲೆಂಡ್, ಭಾರತ, ಇರಾನ್ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಕೊರೊನಾ ವೈರಸ್ ಸೊಂಕು ಹರಡಿದೆ. ಈ ದೇಶಗಳಲ್ಲಿ ಲಾಕ್ಡೌನ್ ಘೋಷಿಸಲಾಗಿದೆ. ವಿದೇಶಿ ವಿಮಾನಗಳ ಹಾರಾಟ ರದ್ದಾಗಿದೆ. ಜನರು ಮನೆಗಳನ್ನು ಬಿಟ್ಟು ಬರದಂತೆ ನಿಷೇಧ ಹೇರಲಾಗಿದೆ. ವೈರಸ್ನ ಹರಡುವಿಕೆಗೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇಲ್ಲಿಯವರೆಗೆ ಲಕ್ಷಾಂತರ ಜನರು ಸೋಂಕಿನಿಂದ ಬಳಲುತ್ತಿದ್ದಾರೆ. ವಿಶ್ವದಾದ್ಯಂತ 16 ಸಾವಿರಕ್ಕೂ ಹೆಚ್ಚು ಜನರು ಈ ವೈರಸ್ಗೆ ಬಲಿಯಾಗಿದ್ದಾರೆ.