ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಫೋಗಟ್ ಅನರ್ಹ | ದೇಶಕ್ಕೇ ಅವಮಾನವಾಗಿದೆ, ಒಲಿಂಪಿಕ್ಸ್ ಬಹಿಷ್ಕರಿಸಿ: ಎಎಪಿ ನಾಯಕ

Published : 7 ಆಗಸ್ಟ್ 2024, 10:28 IST
Last Updated : 7 ಆಗಸ್ಟ್ 2024, 10:28 IST
ಫಾಲೋ ಮಾಡಿ
Comments

ನವದೆಹಲಿ: ಒಲಿಂಪಿಕ್ಸ್‌ ಸ್ಪರ್ಧೆಯಿಂದ ಕುಸ್ತಿಪಟು ವಿನೇಶಾ ಫೋಗಟ್ ಅವರನ್ನು ಅನರ್ಹಗೊಳಿಸಿರುವುದು 'ಇಡೀ ದೇಶಕ್ಕೆ ಮಾಡಿದ ಅವಮಾನ' ಎಂದು ಎಎಪಿ ನಾಯಕ ಸಂಜಯ್‌ ಸಿಂಗ್‌ ಪ್ರತಿಕ್ರಿಯಿಸಿದ್ದಾರೆ.

ಮಹಿಳೆಯರ ಕುಸ್ತಿ ಸ್ಪರ್ಧೆಯ 50 ಕೆ.ಜಿ ವಿಭಾಗದಲ್ಲಿ ಫೈನಲ್‌ ತಲುಪಿದ್ದ ವಿನೇಶಾ, ಅಧಿಕ ತೂಕ ಹೊಂದಿದ್ದಾರೆ ಎಂದು 'ಬಂಗಾರದ ಪದಕ' ಸುತ್ತಿನಿಂದ ಹೊರಹಾಕಲಾಗಿದೆ. ಈ ಬಗ್ಗೆ ಸಿಂಗ್ ಎಕ್ಸ್‌/ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

'ಇದು ವಿನೇಶಾ ಫೋಗಟ್‌ಗಷ್ಟೇ ಅಲ್ಲ. ಇಡೀ ದೇಶಕ್ಕೆ ಆಗಿರುವ ಅವಮಾನ. ಇತಿಹಾಸ ನಿರ್ಮಿಸಲು ಹೊರಟಿದ್ದ ಫೋಗಟ್‌ ಅವರು, 100 ಗ್ರಾಂ ಅಧಿಕ ತೂಕ ಹೊಂದಿದ್ದಾರೆ ಎಂದು ಘೋಷಿಸಿರುವುದು ಮತ್ತು ಅನರ್ಹಗೊಳಿಸಿರುವುದು ಘೋರ ಅನ್ಯಾಯ. ಇಡೀ ದೇಶ ವಿನೇಶಾ ಅವರೊಂದಿಗೆ ಇದೆ. ಭಾರತ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದಾದರೆ ಒಲಿಂಪಿಕ್ಸ್‌ ಅನ್ನೇ ಬಹಿಷ್ಕರಿಸಬೇಕು' ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT