ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವವಿದ್ಯಾಲಯ ಮಟ್ಟದ ಥ್ರೋಬಾಲ್‌ ಪಂದ್ಯ: ಬಸವೇಶ್ವರ ವೈದ್ಯಕೀಯ ಕಾಲೇಜು ಪ್ರಥಮ

Last Updated 28 ಏಪ್ರಿಲ್ 2019, 11:52 IST
ಅಕ್ಷರ ಗಾತ್ರ

ಚಿತ್ರದುರ್ಗ: ಇಲ್ಲಿನ ಎಸ್‌ಜೆಎಂಟಿ ಕಾಲೇಜು ಆವರಣದಲ್ಲಿ ಮೂರು ದಿನ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಥ್ರೋಬಾಲ್‌ ಪಂದ್ಯದಲ್ಲಿ ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಕಾಲೇಜು ಪ್ರಥಮ ಸ್ಥಾನ ಪಡೆದಿದೆ.

ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ ಬಸವೇಶ್ವರ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ವಿಜೇತ ತಂಡಗಳಿಗೆ ಶನಿವಾರ ರಾತ್ರಿ ಬಹುಮಾನ ವಿತರಣೆ ಮಾಡಲಾಯಿತು.

ಪುರುಷರ ವಿಭಾಗದಲ್ಲಿ ನಡೆದ ಪಂದ್ಯದಲ್ಲಿ ಬಸವೇಶ್ವರ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಶಿವಮೊಗ್ಗದ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ತಂಡವನ್ನು ಮಣಿಸಿದರು. ಮಹಿಳೆಯರ ವಿಭಾಗದಲ್ಲಿ ಬಸವೇಶ್ವರ ಕಾಲೇಜು ತಂಡವು ಬೆಂಗಳೂರಿನ ಸಪ್ತಗಿರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ತಂಡವನ್ನು ಸೋಲಿಸಿತು.

ಪ್ರಾಂಶುಪಾಲ ಡಾ.ಜಿ.ಪ್ರಶಾಂತ್, ರೋಗ ವಿಧಾನಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಸಿ.ನಾರಾಯಣಮೂರ್ತಿ, ಸಿ.ಅಭಯ್ ಪ್ರಕಾಶ್, ವಿಶ್ವವಿದ್ಯಾಲಯದ ವೀಕ್ಷಕರಾದ ಡಾ. ಜೋಸೆಫ್ ಅನಿಲ್ ಕುಮಾರ್, ಗೋಪಾಲಕೃಷ್ಣ, ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT