ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಿಳೆಯರ ಕುರಿತು ಟೀಕೆ: ಟೋಕಿಯೊ ಒಲಿಂಪಿಕ್ಸ್‌ ಮುಖ್ಯಸ್ಥ ಯೊಶಿರೊ ರಾಜೀನಾಮೆ

Last Updated 11 ಫೆಬ್ರುವರಿ 2021, 4:04 IST
ಅಕ್ಷರ ಗಾತ್ರ

ಟೋಕಿಯೊ: ಮಹಿಳೆಯರು ಸಭೆ ಸಮಾರಂಭಗಳಲ್ಲಿ ಹೆಚ್ಚು ಹೊತ್ತು ಮಾತನಾಡುತ್ತಾರೆ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ಟೋಕಿಯೊ ಒಲಿಂಪಿಕ್ಸ್‌ ಮುಖ್ಯಸ್ಥ ಹಾಗೂ ಜಪಾನ್‌ನ ಮಾಜಿ ಪ್ರಧಾನಿ ಯೋಶಿರೊ ಮೊರಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಫೆಬ್ರುವರಿ ಮೊದಲ ವಾರದಲ್ಲಿ ನಡೆದ ಜಪಾನಿನ ಒಲಿಂಪಿಕ್ಸ್‌ ಮಂಡಳಿಯ ಸಭೆಯಲ್ಲಿ ಮಾತನಾಡಿದ್ದ ಮೊರಿ, ಮಹಿಳೆಯರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಯೋಶಿರೊ ಮೊರಿ ಹೇಳಿಕೆ ಬಗ್ಗೆ ಟೆನಿಸ್ ತಾರೆ ನವೊಮಿ ಒಸಾಕ, ಗ್ರ್ಯಾಮಿ ಪ್ರಶಸ್ತಿ ಪುರಸ್ಕೃತ ಸಂಗೀತಗಾರ ರೂಚಿ ಸಕಮೊಟೊ ಸೇರಿದಂತೆ ಹಲವು ಕ್ರೀಡಾಪಟುಗಳು ಆಕ್ಷೇಪ ವ್ಯಕ್ತಪಡಿಸಿದ್ದರು.

ಒಲಿಂಪಿಕ್ಸ್‌ ಪದಕ ವಿಜೇತರು, ಜಪಾನ್‌ನ ಕ್ರೀಡಾ ಅಧಿಕಾರಿಗಳು ಮತ್ತು ಟೋಕಿಯೊ ಒಲಿಂಪಿಕ್ಸ್ ಕಾರ್ಯಕರ್ತರು ಮೊರಿ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ರಾಜೀನಾಮೆಗಾಗಿ ಆನ್‌ಲೈನ್‌ನಲ್ಲಿ ನಡೆದ ಅಭಿಯಾನಕ್ಕೆ 10 ಲಕ್ಷಕ್ಕೂ ಅಧಿಕ ಮಂದಿ ಸಹಿ ಮಾಡಿದ್ದರು.

ತಮ್ಮ ಹೇಳಿಕೆ ವಿವಾದದ ತಿರುವು ಪಡೆಯುತ್ತಿದ್ದಂತೆ ಮೊರಿ ಕ್ಷಮೆ ಯಾಚಿಸಿದ್ದರು. ಆದರೆ, ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT