ಚಿಬಾ (ಜಪಾನ್): ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ, ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.

ಶನಿವಾರ ನಡೆದಪುರುಷರ 65 ಕೆಜಿ ಫ್ರೀಸ್ಟೈಲ್ ಕುಸ್ತಿಯಕಂಚಿನ ಪದಕಕ್ಕಾಗಿನ ಹೋರಾಟದಲ್ಲಿ ಭಾರತದ ಪೈಲ್ವಾನ ಬಜರಂಗ್ ಪೂನಿಯಾ, ಕಜಕಿಸ್ತಾನದ ದೌಲತ್ ನಿಯಾಜ್‌ಬೆಕೋವ್ ವಿರುದ್ಧ 8-0ರಿಂದಗೆಲುವು ದಾಖಲಿಸಿದರು.

ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಜಯಿಸುವ ಭರವಸೆಯಾಗಿದ್ದ ಬಜರಂಗ್ ಪೂನಿಯಾ, ಗಾಯದ ಸಮಸ್ಯೆಯಿಂದಾಗಿ ಹಿನ್ನಡೆ ಅನುಭವಿಸಿದರು. ಆದರೂ ದೇಶಕ್ಕಾಗಿ ಕಂಚಿನ ಪದಕ ಗೆಲ್ಲುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಅಲ್ಲದೆ2019ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಜಕಿಸ್ತಾನದ ಕುಸ್ತಿಪಟು ವಿರುದ್ಧ ಸೆಮಿಫೈನಲ್‌ನಲ್ಲಿ ಎದುರಾದ ಸೋಲಿಗೆ ಬಜರಂಗ್ ಸೇಡು ತೀರಿಸಿಕೊಂಡರು.

ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತದ ಆರನೇ ಕುಸ್ತಿಪಟು...
ಬಜರಂಗ್ ಪೂನಿಯಾ, ಒಲಿಂಪಿಕ್ಸ್ ಕುಸ್ತಿ ಸ್ಪರ್ಧೆಯಲ್ಲಿ ಪದಕ ಗೆದ್ದ ಭಾರತದ ಆರನೇ ಕುಸ್ತಿಪಟು ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಅಲ್ಲದೆ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುತ್ತಿರುವ ಎರಡನೇ ಕುಸ್ತಿಪಟು ಎಂದೆನಿಸಿದ್ದಾರೆ. ಈ ಮುನ್ನ ಪುರುಷರ 57 ಕೆ.ಜಿ. ವಿಭಾಗದಲ್ಲಿ ರವಿಕುಮಾರ್ ದಹಿಯಾ, ಬೆಳ್ಳಿ ಪದಕ ಜಯಿಸಿದ್ದರು.

ಒಲಿಂಪಿಕ್ಸ್ ಕುಸ್ತಿಯಲ್ಲಿ ಪದಕ ಗೆದ್ದ ಭಾರತೀಯರು:
ಕೆ.ಡಿ. ಜಾಧವ್ (ಕಂಚು,1952),
ಸುನಿಲ್ ಕುಮಾರ್ (ಕಂಚು, 2008 ಮತ್ತು ಬೆಳ್ಳಿ 2012),
ಯೋಗೇಶ್ವರ್ ದತ್ (ಕಂಚು, 2012),
ಸಾಕ್ಷಿ ಮಲಿಕ್ (ಕಂಚು, 2016)
ರವಿಕುಮಾರ್ ದಹಿಯಾ (2021, ಬೆಳ್ಳಿ)
ಬಜರಂಗ್ ಪೂನಿಯಾ (2021, ಕಂಚು)

ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.