ನವದೆಹಲಿ: ಭಾರತ ಕುಸ್ತಿ ಫೆಡರೇಷನ್‌ನ (ಡಬ್ಲ್ಯುಎಫ್‌ಐ) ಅಧ್ಯಕ್ಷ ಸ್ಥಾನಕ್ಕೆ ಉತ್ತರ ಪ್ರದೇಶ ಕುಸ್ತಿ ಸಂಸ್ಥೆಯ ಉಪಾಧ್ಯಕ್ಷ ಸಂಜಯ್ ಕುಮಾರ್ ಸಿಂಗ್ ಮತ್ತು 2010ರ ಕಾಮನ್‌ವೆಲ್ತ್ ಕೂಟದ ಚಿನ್ನದ ಪದಕ ವಿಜೇತೆ ಕುಸ್ತಿಪಟು ಅನಿತಾ ಶೊರಾಣ್ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ.
ಕಣದಲ್ಲಿದ್ದ ಇತರ ಇಬ್ಬರು ಅಭ್ಯರ್ಥಿಗಳಾದ ದುಷ್ಯಂತ್ ಶರ್ಮಾ ಮತ್ತು ಜೈಪ್ರಕಾಶ್ ಅವರು ಶನಿವಾರ ತಮ್ಮ ನಾಮಪತ್ರಗಳನ್ನು ವಾಪಸ್ ಪಡೆದರು. ಡಬ್ಲ್ಯುಎಫ್‌ಐ ಚುನಾವಣೆ ಆ.12 ರಂದು ನಡೆಯಲಿದೆ.
ಸಂಜಯ್ ಕುಮಾರ್ ಅವರು ಫೆಡರೇಷನ್ ಮಾಜಿ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರ ಆಪ್ತರಾಗಿದ್ದಾರೆ. ಅನಿತಾ ಅವರು ಒಡಿಶಾ ಕುಸ್ತಿ ಸಂಸ್ಥೆಯ ಪ್ರತಿನಿಧಿಯಾಗಿ ಕಣದಲ್ಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.