ಸಮರ್ಖಂಡ್ (ಉಜ್ಬೇಕಿಸ್ತಾನ): ಭಾರತದ ಗ್ರ್ಯಾಂಡ್ಮಾಸ್ಟರ್ ಆರ್.ವೈಶಾಲಿ ಸತತ ಎರಡನೇ ಬಾರಿ ಫಿಡೆ ಮಹಿಳಾ ಗ್ರ್ಯಾಂಡ್ ಸ್ವಿಸ್ ಟೂರ್ನಿಯಲ್ಲಿ ಚಾಂಪಿಯನ್ ಕಿರೀಟ ಧರಿಸಿದರು. ಆ ಮೂಲಕ ಮುಂದಿನ ವರ್ಷದ ಪ್ರತಿಷ್ಠಿತ ಮಹಿಳಾ ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿಯಲ್ಲಿ ಆಡುವ ಅರ್ಹತೆಯನ್ನೂ ಸಂಪಾದಿಸಿದರು.

ಮಾಜಿ ವಿಶ್ವ ಮಹಿಳಾ ಚಾಂಪಿಯನ್ ಝೊಂಗ್ಯಿ ತಾನ್ ಜೊತೆ ಸೋಮವಾರ ಹೋರಾಡಿ ಡ್ರಾ ಸಾಧಿಸುವ ಮೂಲಕ ಅವರು ಅಂತಿಮವಾಗಿ 11 ಸುತ್ತುಗಳಿಂದ 8 ಅಂಕ ಕಲೆಹಾಕಿದರು.

ಅಜರ್ಬೈಜಾನ್ನ ಉಲ್ವಿಯಾ ಫತಾಲಿಯೇವಾ ಜೊತೆ ಡ್ರಾ ಮಾಡಿಕೊಂಡ ರಷ್ಯಾದ ಕ್ಯಾತರಿನಾ ಲಾಗ್ನೊ ಸಹ ಎಂಟು ಅಂಕ ಪಡೆದರೂ ಟೈಬ್ರೇಕರ್ನಲ್ಲಿ ಎರಡನೇ ಸ್ಥಾನಕ್ಕೆ ಸರಿದರು. ಈ ಟೂರ್ನಿಯಿಂದ ಇಬ್ಬರು ಕ್ಯಾಂಡಿಡೇಟ್ಸ್ಗೆ ಅರ್ಹತೆ ಪಡೆಯುವ ಕಾರಣ ಲಾಗ್ನೊ ಸಹ ಅವಕಾಶ ಪಡೆದರು.

ಈ ಟೂರ್ನಿಯಲ್ಲಿ ವೈಶಾಲಿ ಆರು ಪಂದ್ಯ ಗೆದ್ದು, ಒಂದು ಸೋತು, ನಾಲ್ಕು ಡ್ರಾ ಮಾಡಿಕೊಂಡರು.

ವೈಶಾಲಿ ಅವರು ಕ್ಯಾಂಡಿಡೇಟ್ಸ್ಗೆ ಅರ್ಹತೆ ಪಡೆದ ಭಾರತದ ಮೂರನೇ ಆಟಗಾರ್ತಿ. ಜಾರ್ಜಿಯಾದ ಬಟುಮಿಯಲ್ಲಿ ವಿಶ್ವಕಪ್ ಗೆದ್ದುಕೊಂಡಿದ್ದ ದಿವ್ಯಾ ದೇಶಮುಖ್ ಮತ್ತು ರನ್ನರ್ ಅಪ್ ಆಗಿದ್ದ ಕೋನೇರು ಹಂಪಿ ಅವರು ಈ ಮೊದಲೇ ಅರ್ಹತೆ ಪಡೆದಿದ್ದರು.

ಕಜಾಕಸ್ತಾನದ ಬಿಬಿಸಾರ ಅಸುನ್ಬಯೇವಾ, ಚೀನಾದ ತಾನ್ ಝೊಂಗ್ಯಿ ಮತ್ತು ಯಕ್ಸಿನ್ ಸಾಂಗ್ (ತಲಾ 7.5) ಕ್ರಮವಾಗಿ ಮೂರರಿಂದ ಐದರವರೆಗಿನ ಸ್ಥಾನಗಳನ್ನು ಪಡೆದರು.

ಓಪನ್ ವಿಭಾಗದಲ್ಲಿ ಡಚ್ ಗ್ರ್ಯಾಂಡ್ಮಾಸ್ಟರ್ ಅನಿಶ್ ಗಿರಿ ಎಂಟು ಅಂಕ ಗಳಿಸಿ ಪ್ರಶಸ್ತಿ ಗೆದ್ದುಕೊಂಡರು.

ಗಿರಿ ಜೊತೆಗೆ ಈ ಟೂರ್ನಿಯಲ್ಲಿ ಎರಡನೇ ಸ್ಥಾನ ಪಡೆದ ಮಥಾಯಸ್ ಬ್ಲೂಬಾಮ್, ಹಿಕಾರು ನಕಾಮುರಾ (ರೇಟಿಂಗ್ ಆಧಾರ), ಆರ್.ಪ್ರಜ್ಞಾನಂದ ಮತ್ತು ಫ್ಯಾಬಿಯಾನ ಕರುವಾನ ಅವರು ಕ್ಯಾಂಡಿಡೇಟ್ಸ್ಗೆ ಅರ್ಹತೆ ಪಡೆಯುವುದು ಖಚಿತವಾಗಿದೆ.

ಕೊನೆಯ ಮೂರು ಸ್ಥಾನಗಳು, ಗೋವಾದಲ್ಲಿ ಮುಂದಿನ ತಿಂಗಳು ನಡೆಯುವ ವಿಶ್ವಕಪ್ನಲ್ಲಿ ತೀರ್ಮಾನವಾಗಲಿವೆ. ಕ್ಯಾಂಡಿಡೇಟ್ಸ್ ವಿಜೇತರು ಹಾಲಿ ವಿಶ್ವ ಚಾಂಪಿಯನ್ ಗುಕೇಶ್ ಅವರಿಗೆ ಸವಾಲು ಹಾಕುವ ಅರ್ಹತೆ ಪಡೆಯುತ್ತಾರೆ.

ಭಾರತದ ಅರ್ಜುನ್ ಇರಿಗೇಶಿ, ನಿಹಾಲ್ ಸರಿನ್, ವಿದಿತ್ ಗುಜರಾತಿ ತಲಾ 7 ಅಂಕ, ಪ್ರಣವ್ ವಿ. ಅವರು 6.5 ಅಂಕ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.