ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾಡ್ಜ್‌ ಬಾಲ್‌: ರೆಫರಿಯಾಗಿ ವಿಜೇತ್ ಆಯ್ಕೆ

Published 2 ಜೂನ್ 2023, 13:03 IST
Last Updated 2 ಜೂನ್ 2023, 13:03 IST
ಅಕ್ಷರ ಗಾತ್ರ

ಉಪ್ಪಿನಂಗಡಿ (ದಕ್ಷಿಣ ಕನ್ನಡ): ಡಾಡ್ಜ್‌ ಬಾಲ್‌ ಲೆವೆಲ್‌–1 ರೆಫರಿಯಾಗಿ ಉಪ್ಪಿನಂಗಡಿಯ ವಿಜೇತ್ ಕುಮಾರ್ ಜೈನ್ ಆಯ್ಕೆಯಾಗಿದ್ದಾರೆ. ಮಲೇಷ್ಯಾದಲ್ಲಿ ನಡೆದ ಮೂರು ದಿನಗಳ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅವರು ಉಪ್ಪಿನಂಗಡಿಯ ನೆಕ್ಕಿಲಾಡಿ ಹಳೆಯೂರು ನಿವಾಸಿ.

ಮೇ 25ರಿಂದ 28ರ ವರೆಗೆ ಮಲೇಷ್ಯಾದಲ್ಲಿ ನಡೆದ ಏಷ್ಯಾ ಪೆಸಿಫಿಕ್ ಡಾಡ್ಜ್ ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಂಡ ಭಾರತ ತಂಡದ ತರಬೇತುದಾರರಾಗಿ ಕಾರ್ಯನಿರ್ವಹಿಸಿದ್ದ ಅವರು ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದರು. ಮಂಗಳೂರು ವಿಶ್ವವಿದ್ಯಾಲಯದಿಂದ ಎಂಪಿಇಡಿ ಗಳಿಸಿದ್ದರು. 

ವಿಜೇತ್ ಕುಮಾರ್‌, ಹಳೆಯೂರು ನವ ನಿಲಯದ ಪಿ.ಬಿ.ನವೀನ್‌ ಕುಮಾರ್ ಮತ್ತು ಬಿ.ವಿಮಲಾ ದಂಪತಿಯ ಪುತ್ರ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT