ಬೆಂಗಳೂರು: ಪ್ರೈಮ್ ವಾಲಿಬಾಲ್ ಲೀಗ್‌ನಲ್ಲಿ ಆಡುವ ಬೆಂಗಳೂರು ಟಾರ್ಪಿಡೊಸ್ ತಂಡಕ್ಕೆ ರಂಜೀತ್ ಸಿಂಗ್ ಅವರು ನಾಯಕರಾಗಿ ಆಯ್ಕೆಯಾಗಿದ್ದಾರೆ.ಮಂಗಳವಾರ ಕ್ಲಬ್ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದೆ.

ಹೈದರಾಬಾದ್‌ನ ಗಚ್ಚಿಬೌಲಿ ಕ್ರೀಡಾಂಗಣದಲ್ಲಿ ಫೆಬ್ರುವರಿ 5ರಿಂದ ಲೀಗ್ ನಡೆಯಲಿದೆ.

ಪಂಜಾಬ್‌ನ ರಂಜೀತ್, ಭಾರತ ತಂಡದ ಪರ 50ಕ್ಕಿಂತ ಹೆಚ್ಚು ಪಂದ್ಯಗಳನ್ನು ಆಡಿದ್ದಾರೆ. 2012ರಲ್ಲಿ 22ನೇ ವಯಸ್ಸಿನಲ್ಲಿ ರಾಷ್ಟ್ರೀಯ ತಂಡಕ್ಕೆ ಪದಾರ್ಪಣೆ ಮಾಡಿದ್ದ ಅವರು, ಯೂತ್ ವಿಶ್ವ ಚಾಂಪಿಯನ್‌ಷಿಪ್ ಮತ್ತು ವಿಶ್ವವಿದ್ಯಾನಿಲಯ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ತಲಾ ಎರಡು ಬಾರಿ ಭಾರತವನ್ನು ಪ್ರತಿನಿಧಿಸಿದ್ದಾರೆ.

ಡಿಸೆಂಬರ್‌ನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಟಾರ್ಪಿಡೊಸ್ ಅವರನ್ನು ₹ 4.4 ಲಕ್ಷಕ್ಕೆ ತನ್ನದಾಗಿಸಿಕೊಂಡಿತ್ತು.

ರಂಜೀತ್ 2014ರಲ್ಲಿ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದರು. ಅವರ ಸಾರಥ್ಯದಲ್ಲಿ ತಂಡವು ಬೆಳ್ಳಿ ಪದಕ ಗೆದ್ದುಕೊಂಡಿತ್ತು. ತಲಾ ಎರಡು ಬಾರಿ ಏಷ್ಯಾಕಪ್, ಏಷ್ಯನ್ ಗೇಮ್ಸ್, ಏಷ್ಯನ್ ಚಾಂಪಿಯನ್‌ಷಿಪ್ ಮತ್ತು ದಕ್ಷಿಣ ಏಷ್ಯಾ ಕ್ರೀಡಾಕೂಟದಲ್ಲಿ ತಂಡವನ್ನು ಪ್ರತಿನಿಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.