ದಾವಣಗೆರೆ: ಅಮೋಘ ಪ್ರದರ್ಶನ ತೋರಿದ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಪುರುಷರ ತಂಡವು ದಾವಣಗೆರೆ ವಿಶ್ವವಿದ್ಯಾಲಯದ ಆಶ್ರಯದಲ್ಲಿ ನಡೆಯುತ್ತಿರುವ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯಗಳ ಕೊಕ್ಕೊ ಟೂರ್ನಿಯಲ್ಲಿ ಐದನೇ ಸುತ್ತು ಪ್ರವೇಶಿಸಿದೆ.

ವಿ.ವಿ.ಆವರಣದ ಅಂಗಳದಲ್ಲಿ ಶುಕ್ರವಾರ ನಡೆದ ‘ಎ’ ಗುಂಪಿನ ಪಂದ್ಯಗಳಲ್ಲಿ ವಿಟಿಯು 14–13ರಿಂದ ಅಣ್ಣಾಮಲೈ ವಿಶ್ವವಿದ್ಯಾಲಯದ ಎದುರು, 19–06ರಿಂದ ಹೈದರಾಬಾದ್ನ ಎಂ.ಆರ್.ವಿಶ್ವವಿದ್ಯಾಲಯದ ಎದುರು ಹಾಗೂ 16–12ರಿಂದ ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಎದುರು ಜಯಿಸಿತು. ಮತ್ತೊಂದು ಪಂದ್ಯದಲ್ಲಿ ಈ ತಂಡಕ್ಕೆ ‘ವಾಕ್ಓವರ್’ ಲಭಿಸಿತು.

‘ಎ’ ಗುಂಪಿನಲ್ಲೇ ಸ್ಥಾನ ಹೊಂದಿರುವ ಮದ್ರಾಸ್ ವಿಶ್ವವಿದ್ಯಾಲಯವು ಮೂರು ಪಂದ್ಯಗಳನ್ನು ಗೆದ್ದು ಅಜೇಯ ಓಟ ಮುಂದುವರಿಸಿದೆ.

‘ಬಿ’ ಗುಂಪಿನಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಹಾಗೂ ಶಿವಮೊಗ್ಗ ಜಿಲ್ಲೆ ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯ ತಂಡಗಳು ತಲಾ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿವೆ.

‘ಸಿ’ ಗುಂಪಿನಲ್ಲಿ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ಕೇರಳದ ಕ್ಯಾಲಿಕಟ್ ವಿಶ್ವವಿದ್ಯಾಲಯ, ‘ಡಿ’ ಗುಂಪಿನಲ್ಲಿ ಮೈಸೂರು ವಿಶ್ವವಿದ್ಯಾಲಯ ಮತ್ತು ಬೆಂಗಳೂರು ನಗರ ವಿಶ್ವವಿದ್ಯಾಲಯ ತಂಡಗಳೂ ತಲಾ ಮೂರು ಪಂದ್ಯಗಳನ್ನು ಜಯಿಸಿ ಮುಂದಿನ ಸುತ್ತಿಗೆ ಮುನ್ನಡೆದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.