ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

WFI ಅಮಾನತುಗೊಂಡಿಲ್ಲ, ಗೊಂದಲ ಸೃಷ್ಟಿಸಲು ಚಟುವಟಿಕೆ ಸ್ಥಗಿತ: ಪ್ರಿಯಾಂಕಾ ಗಾಂಧಿ

Published 26 ಡಿಸೆಂಬರ್ 2023, 3:16 IST
Last Updated 26 ಡಿಸೆಂಬರ್ 2023, 3:16 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರ, ಭಾರತ ಕುಸ್ತಿ ಫೆಡರೇಷನ್‌ (ಡಬ್ಲ್ಯುಎಫ್‌ಐ) ಅನ್ನು ಅಮಾನತು ಮಾಡಿಲ್ಲ, ಬದಲಿಗೆ ಗೊಂದಲ ಸೃಷ್ಟಿಸಲು ಅದರ ಚಟುವಟಿಕೆಗಳನ್ನು ನಿಲ್ಲಿಸಿದೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

ಭಾರತ ಕುಸ್ತಿ ಫೆಡರೇಷನ್‌ ಅನ್ನು ಅಮಾನತು ಮಾಡಲಾಗಿದೆ ಎಂದು ಕೇಂದ್ರ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ. ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದರಿಗೆ ಆಶ್ರಯ ನೀಡಲು ಇಂತಹ ಗೊಂದಲ ಸೃಷ್ಟಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. 

ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಬೆಳಕಿಗೆ ಬಂದಾಗ ಬಿಜೆಪಿ ಯಾವಾಗಲೂ ಆರೋಪಿಗಳನ್ನು ರಕ್ಷಿಸುವ ಮತ್ತು ಸಂತ್ರಸ್ತರಿಗೆ ಚಿತ್ರಹಿಂಸೆ ನೀಡುವ ಕೆಲಸ ಮಾಡುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಫೆಡರೇಷನ್‌ ಅನ್ನು ಅಮಾನತು ಮಾಡಿಲ್ಲ, ಬದಲಿಗೆ ಅದರ ಚಟುವಟಿಕೆಗಳನ್ನು ನಿಲ್ಲಿಸಲಾಗಿದೆ. ಬಿಜೆಪಿ, ಇಂತಹ ಸುಳ್ಳು ಸುದ್ದಿಗಳನ್ನು ಹರಡಿ, ಜನರಲ್ಲಿ ಗೊಂದಲ ಮೂಡಿಸಿ, ಆರೋಪಿಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದೆ ಎಂದರು. 

ದೌರ್ಜನ್ಯಕ್ಕೊಳಗಾದ ಮಹಿಳೆಯರ ಧ್ವನಿಯನ್ನು ಹತ್ತಿಕ್ಕಲು ಬಿಜೆಪಿ ಈ ಮಟ್ಟಕ್ಕೆ ಇಳಿಯಬೇಕೇ? ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಭಾರತ ಕುಸ್ತಿ ಫೆಡರೇಷನ್‌ (ಡಬ್ಲ್ಯುಎಫ್‌ಐ)ನ ಅಧ್ಯಕ್ಷರಾಗಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಕುಮಾರ್ ಸಿಂಗ್‌ ಅವರು ಆಯ್ಕೆಯಾಗಿದ್ದು, ಇದನ್ನು ವಿರೋಧಿಸಿ ಕುಸ್ತಿಪಟು ಸಾಕ್ಷಿ ಮಲಿಕ್ ಕುಸ್ತಿಗೆ ವಿದಾಯ ಹೇಳಿದ್ದರು. ನಂತರದ ಬೆಳವಣಿಗೆಗಳಲ್ಲಿ ಕ್ರೀಡಾ ಸಚಿವಾಲಯ ಫೆಡರೇಷನ್‌ ಅನ್ನು ಅಮಾನತು ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT