ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಬೇಡ; ಬೃಂದಾ ಕಾರಟ್‌‌ರನ್ನು ವೇದಿಕೆಯಿಂದ ಕೆಳಗಿಳಿಸಿದ ಕುಸ್ತಿಪಟುಗಳು

Last Updated 19 ಜನವರಿ 2023, 12:49 IST
ಅಕ್ಷರ ಗಾತ್ರ

ನವದೆಹಲಿ: ಕ್ರೀಡೆಯನ್ನು ರಾಜಕೀಯಗೊಳಿಸಬಾರದು ಎಂಬ ಉದ್ದೇಶದೊಂದಿಗೆ ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ವೇದಿಕೆಗೆ ಆಗಮಿಸಿದ್ದ ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್‌ ಅವರನ್ನು ಕುಸ್ತಿಪಟುಗಳು ವೇದಿಕೆಯಿಂದ ಕೆಳಗಿಳಿಸಿರುವ ಘಟನೆ ಗುರುವಾರ ನಡೆದಿದೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ.

ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಜಾಕ್ಕೆ ಆಗ್ರಹಿಸಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಇದಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಆದರೆ ಈ ಪ್ರಕರಣವನ್ನು ರಾಜಕೀಯಗೊಳಿಸಬಾರದು ಎಂದು ಕೈಮುಗಿದುಕೊಂಡು ಬೇಡುತ್ತೇನೆ ಎಂದು ಹೇಳಿರುವ ಕುಸ್ತಿಪಟು ಬಜರಂಗ್ ಪೂನಿಯಾ, ದಯವಿಟ್ಟು ವೇದಿಕೆಯಿಂದ ಕೆಳಗಿಳಿಯಿರಿ ಎಂದು ಬೃಂದಾ ಕಾರಟ್ ಅವರನ್ನು ವಿನಂತಿಸಿದ್ದಾರೆ.

ಬಿಜೆಪಿ ಸಂಸದರೂ ಆಗಿರುವ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಸರ್ವಾಧಿಕಾರಿ ಧೋರಣೆ ವಿರುದ್ಧ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವೂ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT