ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆಯ್ಕೆ ಟ್ರಯಲ್ಸ್‌ ಸುತ್ತೋಲೆ ಹಿಂತೆಗೆದುಕೊಳ್ಳಲಿರುವ ಡಬ್ಲ್ಯುಎಫ್ಐ: ಹೈಕೋರ್ಟ್

Published 7 ಮಾರ್ಚ್ 2024, 19:47 IST
Last Updated 7 ಮಾರ್ಚ್ 2024, 19:47 IST
ಅಕ್ಷರ ಗಾತ್ರ

ನವದೆಹಲಿ: ಸೀನಿಯರ್ ಏಷ್ಯನ್ ಕುಸ್ತಿ ಚಾಂಪಿಯನ್‌ಷಿಪ್‌ 2024 ಮತ್ತು ಏಷ್ಯನ್ ಒಲಿಂಪಿಕ್ ಗೇಮ್ಸ್ ಕ್ವಾಲಿಫೈಯರ್ ಕುಸ್ತಿ ಪಂದ್ಯಾವಳಿಗೆ ಆಯ್ಕೆ ಟ್ರಯಲ್ಸ್ ನಡೆಸುವ ಕುರಿತ ಸುತ್ತೋಲೆಯನ್ನು ಹಿಂತೆಗೆದುಕೊಳ್ಳುವುದಾಗಿ ಅಮಾನತುಗೊಂಡಿರುವ ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ಗುರುವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ಡಬ್ಲ್ಯುಎಫ್ಐ ಪರ ವಕೀಲರು ನೀಡಿದ ಹೇಳಿಕೆ ಗಮನಿಸಿದ ನ್ಯಾಯಮೂರ್ತಿ ಸಚಿನ್ ದತ್ತಾ, ಡಬ್ಲ್ಯುಎಫ್‌ಐನ ತಾತ್ಕಾಲಿಕ ಸಮಿತಿ ಹೊರಡಿಸಿದ ಸುತ್ತೋಲೆಯ ಪ್ರಕಾರ ಆಯ್ಕೆ ಟ್ರಯಲ್ಸ್‌ ಮುಂದುವರಿಯುತ್ತವೆ ಎಂದು ಹೇಳಿದರು.

ಏಷ್ಯನ್ ಒಲಿಂಪಿಕ್ ಅರ್ಹತಾ ಪಂದ್ಯಗಳು (ಏಪ್ರಿಲ್ 19-21) ಮತ್ತು ವಿಶ್ವ ಒಲಿಂಪಿಕ್ ಅರ್ಹತಾ ಪಂದ್ಯಗಳು (ಮೇ 9-12) ಮಾರ್ಚ್ 10 ಮತ್ತು 11 ರಂದು ಪಟಿಯಾಲಾದ ನೇತಾಜಿ ಸುಭಾಷ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಸ್ಪೋರ್ಟ್ಸ್ ಮತ್ತು ಸೋನಿಪತ್‌ನ ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್) ಸಂಕೀರ್ಣದಲ್ಲಿ ನಡೆಯಲಿದೆ ಎಂದು ಡಬ್ಲ್ಯುಎಫ್ಐನ ತಾತ್ಕಾಲಿಕ ಸಮಿತಿ ಫೆಬ್ರವರಿ 9 ರಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿತ್ತು.

ವಾದ–ಪ್ರತಿವಾದಗಳ ಬಳಿಕ ಹಿರಿಯ ವಕೀಲ ದಯಾನ್ ಕೃಷ್ಣನ್ ಅವರು ಡಬ್ಲ್ಯುಎಫ್ಐ ಸುತ್ತೋಲೆಯನ್ನು ಹಿಂತೆಗೆದುಕೊಳ್ಳತ್ತದೆ ಎಂದು ಹೇಳಿದರು. ಫೆಬ್ರುವರಿ 9ರ ಸುತ್ತೋಲೆಯ ಪ್ರಕಾರ ಆಯ್ಕೆ ಟ್ರಯಲ್ಸ್‌  ಮುಂದುವರಿಯುತ್ತವೆ.

ತಾತ್ಕಾಲಿಕ ಸಮಿತಿಯು ಎಲ್ಲಾ ಅರ್ಹ ಕ್ರೀಡಾಪಟುಗಳಿಗೆ ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ಅನುಮತಿಸುತ್ತದೆ ಖಚಿತಪಡಿಸುತ್ತದೆ ಎಂದು ಹೇಳಬೇಕಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ. ಮುಂದಿನ ವಿಚಾರಣೆಯನ್ನು ಏಪ್ರಿಲ್ 26ಕ್ಕೆ ನಿಗದಿಪಡಿಸಿದೆ.

ಕಳೆದ ಡಿಸೆಂಬರ್‌ನಲ್ಲಿ ನಡೆದ ಭಾರತ ಕುಸ್ತಿ ಫೆಡರೇಷನ್‌ ಚುನಾವಣೆಯನ್ನು ಕಾನೂನುಬಾಹಿರ ಮತ್ತು ಅದನ್ನು ಅನೂರ್ಜಿಗೊಳಿಸಬೇಕು ಎಂದು ಕುಸ್ತಿಪಟುಗಳಾದ ಬಜರಂಗ್ ಪೂನಿಯಾ, ವಿನೇಶಾ ಫೋಗಾಟ್, ಸಾಕ್ಷಿ ಮಲಿಕ್ ಮತ್ತು ಅವರ ಪತಿ ಸತ್ಯವ್ರತ ಕಾದಿಯಾನ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌, ಮಾರ್ಚ್ 4ರಂದು ಕೇಂದ್ರ ಸರ್ಕಾರ ಮತ್ತು ಫೆಡರೇಷನ್ (ಡಬ್ಲ್ಯುಎಫ್ಐ) ಪ್ರತಿಕ್ರಿಯೆ ಕೋರಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT