ಭುವನೇಶ್ವರ: ಬೆಲ್ಜಿಯಂ ಹಾಗೂ ಅಮೆರಿಕ ತಂಡಗಳು ಇಲ್ಲಿನ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ವಿಶ್ವವಿದ್ಯಾಲಯದಲ್ಲಿ ಭಾನುವಾರ ಮುಕ್ತಾಯವಾದ ವಿಶ್ವ ಬೀಚ್ ವಾಲಿಬಾಲ್ ಟೂರ್ನಿಯಲ್ಲಿ ಕ್ರಮವಾಗಿ ಪುರುಷರ ಮತ್ತು ಮಹಿಳೆಯರ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡವು.

ಕೆಐಐಟಿ ಕ್ಯಾಂಪಸ್ನ ದ್ಯುತಿ ಚಂದ್ ಅಥ್ಲೆಟಿಕ್ ಕ್ರೀಡಾಂಗಣದಲ್ಲಿ ನಡೆದ ಪುರುಷರ ಫೈನಲ್ ಹಣಾಹಣಿಯಲ್ಲಿ ಬೆಲ್ಜಿಯಂ ತಂಡವು ಜೆಕ್ ಗಣರಾಜ್ಯ ತಂಡವನ್ನು ಸೋಲಿಸಿತು. ಇಸ್ರೇಲ್ ತಂಡವು ಕಂಚಿನ ಪದಕ ತನ್ನದಾಗಿಸಿಕೊಂಡಿತು. ಮಹಿಳೆಯರ ವಿಭಾಗದ ಪ್ರಶಸ್ತಿ ಸುತ್ತಿನಲ್ಲಿ ಅಮೆರಿಕ ತಂಡವು ಜಪಾನ್ ತಂಡದ ವಿರುದ್ಧ ಗೆಲುವು ಸಾಧಿಸಿತು.

ಐದು ದಿನ ನಡೆದ ಈ ಚಾಂಪಿಯನ್ಷಿಪ್ನಲ್ಲಿ ವಿಶ್ವದ 52 ದೇಶಗಳ 83 ತಂಡಗಳು ಟೂರ್ನಿಯಲ್ಲಿ ಭಾಗವಹಿಸಿದ್ದವು. ಕೆಐಐಟಿ ಸಂಸ್ಥಾಪಕ ಅಚ್ಯುತ ಸಮಂತ ಅವರು ಪದಕ ವಿಜೇತರನ್ನು ಸನ್ಮಾನಿಸಿದರು. ಕೆಐಐಟಿ ವಿಶ್ವವಿದ್ಯಾಲಯದಲ್ಲಿನ ಕ್ರೀಡಾ ಮೂಲಸೌಕರ್ಯದ ಬಗ್ಗೆ ಆಟಗಾರರು ಮತ್ತು ಅಧಿಕಾರಿಗಳು ಪ್ರಶಂಸಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.