ಶುಕ್ರವಾರ, 8 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಯೂನಿವರ್ಸಿಟಿ ಗೇಮ್ಸ್: ಭಾರತಕ್ಕೆ 3 ಚಿನ್ನ

Published 29 ಜುಲೈ 2023, 15:31 IST
Last Updated 29 ಜುಲೈ 2023, 15:31 IST
ಅಕ್ಷರ ಗಾತ್ರ

ನವದೆಹಲಿ: ಚೀನಾದ ಚೆಂಗ್ಡುವಿನಲ್ಲಿ ನಡೆಯುತ್ತಿರುವ ವಿಶ್ವ ಯೂನಿವರ್ಸಿಟಿ ಗೇಮ್ಸ್‌ನಲ್ಲಿ ಭಾರತ ತಂಡ ಪದಕದ ಖಾತೆ ತೆರೆದಿದ್ದು, ಶನಿವಾರ ಮೂರು ಚಿನ್ನ ಹಾಗೂ ಒಂದು ಕಂಚು ಜಯಿಸಿದೆ.

ಒಲಿಂಪಿಯನ್‌ ಶೂಟರ್‌ ಇಳವೇನಿಲ್‌ ವಾಳರಿವನ್ ಅವರು ಮಹಿಳೆಯರ 10 ಮೀ. ಏರ್‌ ರೈಫಲ್‌ ವಿಭಾಗದಲ್ಲಿ ಚಿನ್ನ ಗೆದ್ದು, ಭಾರತಕ್ಕೆ ಮೊದಲ ಪದಕ ತಂದಿತ್ತರು. 2019ರಲ್ಲಿ ಇಟಲಿಯಲ್ಲಿ ನಡೆದಿದ್ದ ಕೂಟದಲ್ಲಿ ಅವರು ಬೆಳ್ಳಿ ಜಯಿಸಿದ್ದರು.

ಮನು ಭಾಕರ್‌ ಅವರು ಮಹಿಳೆಯರ 10 ಮೀ. ಏರ್‌ ಪಿಸ್ತೂಲ್‌ ವಿಭಾಗದಲ್ಲಿ ಚಿನ್ನ ಗೆದ್ದರು. ಮನು ಆ ಬಳಿಕ ಯಶಸ್ವಿನಿ ಸಿಂಗ್‌ ಮತ್ತು ಅಭಿಜ್ಞಾ ಅಶೋಕ್‌ ಪಾಟೀಲ್‌ ಅವರೊಂದಿಗೆ 10 ಮೀ. ಏರ್‌ ಪಿಸ್ತೂಲ್‌ ತಂಡ ವಿಭಾಗದಲ್ಲಿ ಚಿನ್ನ ಜಯಿಸಲು ನೆರವಾದರು.

ಭಾರತಕ್ಕೆ ಇನ್ನೊಂದು ಪದಕ ಜೂಡೊದಲ್ಲಿ ಲಭಿಸಿತು. ಯಾಮಿನಿ ಮೌರ್ಯ ಅವರು ಮಹಿಳೆಯರ 57 ಕೆ.ಜಿ. ವಿಭಾಗದಲ್ಲಿ ಕಂಚು ಜಯಿಸಿದರು.

ಭಾರತದ ಆರ್ಚರಿ ಸ್ಪರ್ಧಿಗಳು ಈ ಕೂಟದಲ್ಲಿ ಎಂಟು ಪದಕಗಳನ್ನು ಖಚಿತಪಡಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT