ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 50 ಕೆ.ಜಿ. ವಿಭಾಗದ ಕುಸ್ತಿ ಸ್ಪರ್ಧೆಯ ಫೈನಲ್‌ನಿಂದ ಅನರ್ಹಗೊಂಡು ಆಘಾತ ಅನುಭವಿಸಿದ್ದ ವಿನೇಶ್ ಫೋಗಟ್ ಅವರು ಭಾರತಕ್ಕೆ ಇಂದು (ಶನಿವಾರ) ಮರಳಿದ್ದಾರೆ. ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಅವರನ್ನು ನೂರಾರು ಅಭಿಮಾನಿಗಳು ನೋಟು ಹಾಗೂ ಹೂವಿನ ಹಾರ ಹಾಕಿ, ಬೆಂಬಲದ ಘೋಷಣೆಗಳೊಂದಿಗೆ ಸ್ವಾಗತಿಸಿದ್ದಾರೆ. ಭಾವುಕರಾದ ಫೋಗಟ್ ಕಣ್ಣೀರು ಸುರಿಸಿದರು. ಆ ಸಂದರ್ಭದಲ್ಲಿ ಕ್ಲಿಕ್ಕಿಸಿದ ಚಿತ್ರಗಳು ಇಲ್ಲಿವೆ...