ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್‌ಗೆ ಯೋಗೇಂದ್ರ ಆಯ್ಕೆ

Published 1 ಜುಲೈ 2024, 20:37 IST
Last Updated 1 ಜುಲೈ 2024, 20:37 IST
ಅಕ್ಷರ ಗಾತ್ರ

ಮೈಸೂರು: ಅಂತರರಾಷ್ಟ್ರೀಯ ಅಥ್ಲೀಟ್‌, ಇಲ್ಲಿನ ಮೈಸೂರು ಅಥ್ಲೆಟಿಕ್ಸ್‌ ಕ್ಲಬ್ ಕಾರ್ಯದರ್ಶಿ ಎಂ. ಯೋಗೇಂದ್ರ ಆಗಸ್ಟ್‌ 13ರಿಂದ 25ರವರೆಗೆ ಸ್ವೀಡನ್‌ನ ಗೋತನ್‌ಬರ್ಗ್‌ನಲ್ಲಿ ನಡೆಯಲಿರುವ 25ನೇ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಅವರು ಚಾಂಪಿಯನ್‌ಷಿಪ್‌ನಲ್ಲಿ ಪುರುಷರ 60 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ 2 ಕಿ.ಮೀ. ಸ್ಟೀಪಲ್‌ ಚೇಸ್‌ನಲ್ಲಿ ಸ್ಪರ್ಧಿಸಲಿದ್ದಾರೆ. ಇದೇ ವರ್ಷ ಫೆಬ್ರುವರಿಯಲ್ಲಿ ಪುಣೆಯಲ್ಲಿ ನಡೆದ 44ನೇ ಮಾಸ್ಟರ್ಸ್ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನಲ್ಲಿ 2 ಕಿ.ಮೀ. ಸ್ಟೀಪಲ್‌ ಚೇಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಅವರು ವಿಶ್ವಮಟ್ಟದ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಳ್ಳುವ ಅವಕಾಶ ಪಡೆದಿದ್ದಾರೆ.

ಯೋಗೇಂದ್ರ ಈವರೆಗೆ 9 ಬಾರಿ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT