ಆನೇಕಲ್:ತಾಲ್ಲೂಕಿನ ಇಂಡ್ಲವಾಡಿಯ ಸೂರ್ಯಸಿಟಿ ನಾಲ್ಕನೇ ಹಂತದಲ್ಲಿ ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಮೇ 23ರಂದು ಭೂಮಿಪೂಜೆ ನಡೆಯಲಿದ್ದು, ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್ ಸೇರಿದಂತೆ ಕ್ರಿಕೆಟ್ ದಿಗ್ಗಜರು ಪಾಲ್ಗೊಳ್ಳಲಿದ್ದಾರೆ ಎಂದು ವಸತಿ ಸಚಿವ ಬಿ.ಝೆಡ್. ಜಮೀರ್ ಅಹಮ್ಮದ್ ಖಾನ್ ತಿಳಿಸಿದರು.

ಕ್ರಿಡಾಂಗಣ ಜಾಗವನ್ನು ಶನಿವಾರ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ವೆಂಕಟೇಶ್ ಪ್ರಸಾದ್, ಅನಿಲ್ ಕುಂಬ್ಳೆ, ಜಾವಗಲ್ ಶ್ರೀನಾಥ್ ಅವರನ್ನು ಆಹ್ವಾನಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೂಮಿಪೂಜೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಒಂದು ಲಕ್ಷ ಕ್ರೀಡಾಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಇದಕ್ಕೆ ಅಗತ್ಯ ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಇಲ್ಲಿ ಕ್ರೀಡಾಂಗಣ ನಿರ್ಮಾಣವಾದರೆ ಕ್ರಿಕೆಟ್ ಜೊತೆಗೆ 25ಕ್ಕೂ ಹೆಚ್ಚು ಕ್ರೀಡೆಗಳಿಗೆ ವೇದಿಕೆ ಸಿಗಲಿದೆ ಎಂದರು.ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಶಾಸಕ ಬಿ.ಶಿವಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಹಾಗಡೆ ಹರೀಶ್, ಮುಖಂಡರಾದ ಇಂಡ್ಲವಾಡಿ ನಾಗರಾಜು, ಐ.ಸಿ.ಎಂ.ಕೃಷ್ಣಮೂರ್ತಿ, ಅಚ್ಯುತರಾಜು, ಬನಹಳ್ಳಿ ಅಭಿ, ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-15-90706211

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.