ಬ್ಯಾಡಗಿ: ಪಟ್ಟಣದ ಅನುಜ್ ಕುಡಿಕೇರ ಇಂಡೊನೇಷ್ಯಾದ ಜಕಾರ್ತಾದಲ್ಲಿ ಇದೇ 29ರಿಂದ ಮೂರು ದಿನ ನಡೆಯಲಿರುವ ಅಂತರರಾಷ್ಟ್ರೀಯ ಸ್ಕೇಟಿಂಗ್ ಚಾಂಪಿಯನ್ಶಿಪ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾನೆ.

ಬೆಂಗಳೂರಿನ ನ್ಯೂಹೊರೈಜನ್ ಗುರುಕುಲದಲ್ಲಿ 3ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ಅನೂಜ್, 8 ವರ್ಷದೊಳಗಿನವರ ಬಾಲಕರ ವಿಭಾಗದಲ್ಲಿ ಸ್ಥಾನ ಪಡೆದುಕೊಂಡಿದ್ದಾನೆ. ಅವರಿಗೆ ಮಿಷನ್ ಕ್ಲಬ್ನಲ್ಲಿ ಮಾಧವ ಎಂಬವರು ತರಬೇತಿ ನೀಡಿದ್ದರು. ಶಿವಮೊಗ್ಗದಲ್ಲಿ ಈಚೆಗೆ ರಾಜ್ಯ ಸ್ಪೀಡ್ ಸ್ಕೇಟಿಂಗ್ ಅಸೋಸಿಯೇಷನ್' ಆಯೋಜಿಸಿದ್ದ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಬೆಂಗಳೂರು ಜಿಲ್ಲೆಯನ್ನು ಪ್ರತಿನಿಧಿಸಿದ್ದ ಆತ ಭರ್ಜರಿ ಪ್ರದರ್ಶನ ನೀಡಿದ್ದ. ಈ ಮೂಲಕ ಎರಡು ಬೆಳ್ಳಿ ಮತ್ತು ಒಂದು ಕಂಚಿನ ಪದಕಗಳನ್ನು ಮುಡಿಗೇರಿಸಿಕೊಂಡಿದ್ದನು.

ಚೆನ್ನೈನಲ್ಲಿ ಕಳೆದ ಜನವರಿಯಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಬೆಳ್ಳಿ ಪದಕ ಪಡೆಯುವ ಮೂಲಕ ರಾಜ್ಯದ ಕೀರ್ತಿಯನ್ನು ಹೆಚ್ಚಿಸಿದ್ದನು.ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ಅಪ್ರತಿಮ ಸಾಧನೆ ಮತ್ತು ಕಠಿಣ ಪರಿಶ್ರಮ ಮಾಡಿರುವ ಅನುಜ್ನನ್ನು ಜಾಗತಿಕ ವೇದಿಕೆಗೆ ತಂದು ನಿಲ್ಲಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-22-86873154

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.