ಮೂಡಲಗಿ: ಬೆಳಗಾವಿ ಜಿಲ್ಲೆಯು ಕಬಡ್ಡಿ ಆಟಕ್ಕೆ ಪ್ರಸಿದ್ಧಿಯನ್ನು ಹೊಂದಿದ್ದು, ಜಿಲ್ಲೆಯ ಅನೇಕ ಕ್ರೀಡಾಪಟುಗಳು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ಜಿಲ್ಲೆಯ ಹೆಮ್ಮೆಯಾಗಿದೆ’ ಎಂದು ಬೆಳಗಾವಿ ಜಿಲ್ಲಾ ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಹಾಲಪ್ಪ ಹುಕ್ಕೇರಿ ಹೇಳಿದರು.

ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಆತಿಥ್ಯದಲ್ಲಿ ಬುಧವಾರ ಜರುಗಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 3ನೇ ವಲಯ ಮಟ್ಟದ ಪುರುಷರ ಕಬಡ್ಡಿ ಟೂರ್ನಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಬಡ್ಡಿಯಂಥ ದೇಸಿ ಕ್ರೀಡೆಗಳನ್ನು ಉಳಿಸಿ ಬೆಳೆಸುವುದು ಅವಶ್ಯಕ ಎಂದರು.

ಬೆಳಗಾವಿ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಪ್ರೊ ಕಬಡ್ಡಿ ಸಂಘಟಿಸುವ ಯೋಚನೆ ಇದ್ದು, ಜಿಲ್ಲೆಯ ಜನ ಪ್ರತಿನಿಧಿಗಳ ಹಾಗೂ ಸಂಘ, ಸಂಸ್ಥೆಯವರ ಸಹಕಾರವಿದ್ದರೆ ಅದು ಖಂಡಿತ ಸಾಧ್ಯವಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಸೋನವಾಲಕರ ಮಾತನಾಡಿದರು. ಕ್ರೀಡಾಪಟುಗಳಿಗೆ ಕ್ರೀಡಾ ಸಮವಸ್ತ್ರ ಪ್ರಾಯೋಜಿಸಿದ್ದ ಮಂಜುನಾಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಲಕ್ಷ್ಮಣ ಅಡಿಹುಡಿ ಹಾಗೂ ಹಾಲಪ್ಪ ಹುಕ್ಕೇರಿ ಅವರನ್ನು ಸಂಸ್ಥೆಯವರು ಸನ್ಮಾನಿಸಿದರು.

ಸಂಸ್ಥೆಯ ಉಪಾಧ್ಯಕ್ಷ ಆರ್.ಪಿ. ಸೋನವಾಲಕರ, ನಿರ್ದೇಶಕರಾದ ಎ.ವಿ. ಹೊಸಕೋಟಿ, ಆಡಳಿತಾಧಿಕಾರಿ ಡಾ. ಎಸ್.ಎಲ್. ಚಿತ್ರಗಾರ, ಪ್ರಾಚಾರ್ಯ ಡಾ. ಎಂ.ಕೆ. ಕಂಕಣವಾಡಿ, ಎಲ್.ಬಿ. ಮಣ್ಣಾಪುರೆ, ಪಿ.ಬಿ. ಚೌಡಕಿ, ಭೀಮಶಿ ಬಡಗಣ್ಣವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-21-1664198719

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.