ಬೆಂಗಳೂರು: ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಕಂಠೀರವ ಕ್ರೀಡಾಂಗಣದಲ್ಲಿ ಮೇ23ರಿಂದ 25ರವರೆಗೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 23ರ ಸಂಜೆ 5.30ಕ್ಕೆ ಚಾಲನೆ ನೀಡಲಿದ್ದಾರೆ.

ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಆನ್ಲೈನ್ನಲ್ಲಿ ಹೆಸರು ನೋಂದಾಯಿಸಿಕೊಂಡ ಕ್ರೀಡಾಪಟು ಗಳಿಗೆ ಟ್ರ್ಯಾಕ್ಸೂಟ್, ಕ್ಯಾಪ್ ವಿತರಿಸಲಾಗುತ್ತದೆ. ಭಾಗವಹಿಸುವವರಿಗೆ ಮೂರು ದಿನಗಳ ಒಒಡಿ ಸೌಲಭ್ಯವಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದ್ದಾರೆ.

ಮೇ 23ರಂದು ಸಂಜೆ 7ಕ್ಕೆ ಗಾಯಕಿ ಸಮಿತಾ ಮಲ್ನಾಡ್ ಮತ್ತು ತಂಡದವರಿಂದ ಸಂಗೀತ ರಸಸಂಜೆ, 24ರಂದು ಸಂಜೆ 6.30ಕ್ಕೆ ಜಾನಪದ ಕಲಾವಿದೆ ಸವಿತಕ್ಕ, ಕಡಬಗೆರೆ ಮುನಿರಾಜು ತಂಡದವರಿಂದ ಜಾನಪದ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ರೀಡಾ ಧ್ವಜಾರೋಹಣ ನೆರವೇರಿಸುವರು, ಗೃಹ ಸಚಿವ ಜಿ.ಪರಮೇಶ್ವರ, ಸಾರಿಗೆ ಸಚಿವ ರಾಮಾಲಿಂಗಾರೆಡ್ಡಿ, ಸಮಾಜಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ವಸತಿ ಸಚಿವ ಜಮೀರ್ ಅಹಮದ್ ಖಾನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಸೇರಿದಂತೆ ಹಲವು ಸಚಿವರು, ಶಾಸಕರು, ನೌಕರರ ಸಂಘಟನೆಯ ಎಲ್ಲ ಪದಾಧಿಕಾರಿಗಳು ಭಾಗವಹಿಸುವರು ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-51-2008669484

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.