‘ಸುಮಾರು ಶೇ 50ರಿಂದ 60ರಷ್ಟು ಟಿಕೆಟ್ಗಳನ್ನು ಸರ್ಕಾರಿ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ವರ್ಗದವರಿಗೆ ವಿತರಿಸಲಾಗುತ್ತಿದೆ. ಅವರಿಗೆ ಹೋಲಿಕೆ ಮಾಡಿದರೆ ನಮ್ಮಲ್ಲಿ ಹಸ್ತಕ್ಷೇಪ ಕಡಿಮೆ ಇದೆ’ ಎಂದೂ ಹೇಳಿದರು.

ಆಸನ ಸಂಖ್ಯೆ ಹೆಚ್ಚಳ: ‘ಚಿನ್ನಸ್ವಾಮಿ ಕ್ರಿಡಾಂಗಣದ ಬಗ್ಗೆಯೂ ಚರ್ಚೆ ಮಾಡಿದ್ದೇವೆ. ಯಾವ ರೀತಿ ಆಸನಗಳ ಸಂಖ್ಯೆ ಹೆಚ್ಚಿಸಬೇಕು ಎಂದು ಮಾತನಾಡಿದ್ದೇವೆ. ಬೇರೆ ಕಡೆ ಕ್ರೀಡಾಂಗಣ ನಿರ್ಮಾಣಕ್ಕೆ ಜಾಗ ಗುರುತಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಆಯುಕ್ತರ ಜತೆ ಚರ್ಚಿಸಲಾಗಿದೆ. ಈ ಕುರಿತ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಿದ ಬಳಿಕ ಚರ್ಚಿಸಿ ಅಗತ್ಯ ಅನುಮತಿ ನೀಡಲಾಗುವುದು. 20 ಸಾವಿರ ಆಸನಗಳ ಸಂಖ್ಯೆ ಹೆಚ್ಚಳ ಮಾಡಿದರೆ ಜನರಿಗೂ ಅನುಕೂಲ ಆಗಲಿದೆ’ ಎಂದು ತಿಳಿಸಿದರು.

ಹಸ್ತಕ್ಷೇಪ ಇಲ್ಲ: ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಾಸಕರು ಹಾಗೂ ಸಚಿವರಿಗೆ ಪ್ರತ್ಯೇಕ ಗ್ಯಾಲರಿ ಮಾಡಬೇಕು ಎಂಬ ಬೇಡಿಕೆ ಬಗ್ಗೆ ಕೇಳಿದಾಗ, ‘ನಾನು ಆ ವಿಚಾರಕ್ಕೆ ಹೋಗುವುದಿಲ್ಲ. ಅದು ಕೆಎಸ್ಸಿಎ ಪದಾಧಿಕಾರಿಗಳಿಗೆ ಬಿಟ್ಟ ವಿಚಾರ. ಅವರ ವ್ಯವಹಾರಗಳಲ್ಲಿ ಅತಿಯಾಗಿ ಹಸ್ತಕ್ಷೇಪ ಮಾಡುವುದಿಲ್ಲ. ನಾವು ಶಾಸಕರು, ಸಂಸದರಾಗಿರಬಹುದು. ಶಾಸಕರಿಂದ ಟಿಕೆಟ್ ಮನವಿ ಬಂದ ಕಾರಣ ಚರ್ಚೆ ಮಾಡಿದ್ದೇನೆ’ ಎಂದರು.

‘ಈಗಾಗಲೇ ಸರ್ಕಾರ ಕ್ರೀಡಾಂಗಣ ನಿರ್ಮಿಸಲು ನಿರ್ಧರಿಸಿದ್ದು, ಕೆಎಸ್ಸಿಎಗೂ ಕ್ರೀಡಾಂಗಣ ನಿರ್ಮಾಣಕ್ಕೆ ಜಾಗ ನೀಡಲಾಗುವುದೇ’ ಎಂಬ ಪ್ರಶ್ನೆಗೆ, ‘ನಾವು ಈಗಾಗಲೇ ಕೆಎಸ್ಸಿಎಯವರಿಗೆ25 ಎಕರೆ ಜಾಗ ನೀಡಿದ್ದೇವೆ. ತುಮಕೂರು, ಮೈಸೂರಿನಲ್ಲಿ ಜಾಗ ನೀಡಿ ದ್ದೇವೆ. ಬೆಂಗಳೂರಿನಲ್ಲಿ ಸೂರ್ಯನಗರದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-51-94208698

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.