ಬಿಡದಿ: ಇಲ್ಲಿನ ‘ಜ್ಞಾನವಿಕಾಸ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಸ್ಟಡೀಸ್’ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ನಡೆದ 2025-26ನೇ ಸಾಲಿನ ಅಂತರ ಕಾಲೇಜು ಮಟ್ಟದ ಮಹಿಳೆಯರ ಕೊಕ್ಕೊ ಪಂದ್ಯಾವಳಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಯುಸಿಪಿ ಕಾಲೇಜು ಪ್ರಥಮ ಸ್ಥಾನ ಪಡೆದಿದೆ.

ಸ್ಥಳೀಯ ಜ್ಞಾನವಿಕಾಸ್ ಕ್ರೀಡಾಂಗಣದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ವಿವಿಧ ಕಾಲೇಜುಗಳಿಂದ ನೂರಾರು ಕ್ರೀಡಾಪಟುಗಳು ಉತ್ಸಾಹದಿಂದ ಭಾಗವಹಿಸಿದ್ದರು.

ಜಿದ್ದಾಜಿದ್ದಿನಿಂದ ಕೂಡಿದ್ದ ಅಂತಿಮ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಯುಸಿಪಿ ಕಾಲೇಜು ಪ್ರಶಸ್ತಿ ಮುಡಿಗೇರಿಸಿಕೊಂಡರೆ, ನೆರಳೂರಿನ ಎಸ್ವಿಆರ್ಎಫ್ಜಿಸಿ ಕಾಲೇಜು ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಮಾಜಿ ಶಾಸಕ, ಸಂಸ್ಥೆಯ ಅಧ್ಯಕ್ಷ ಸಿ.ಎಂ. ಲಿಂಗಪ್ಪ, ‘ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ತಂಡ ಸ್ಫೂರ್ತಿ ಬೆಳೆಸುತ್ತವೆ. ಸೋಲು, ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ’ ಎಂದರು.

ಸಂಸ್ಥೆ ಖಜಾಂಚಿ ಬಿ.ಎನ್. ಗಂಗಾಧರಯ್ಯ, ಕಾಲೇಜು ಪ್ರಾಂಶುಪಾಲ, ದೈಹಿಕ ಶಿಕ್ಷಣ ನಿರ್ದೇಶಕ ಶರತ್ ಕುಮಾರ್, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-14-1004153356

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.