ಭಾಲ್ಕಿ: ‘ಯುವಕರ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಗೆ ಕ್ರೀಡೆಗಳು ಸಹಕಾರಿಯಾಗಿವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಚನ್ನಬಸವಾಶ್ರಮದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ, ವಚನ ಜಾತ್ರೆ-2026, ಚನ್ನಬಸವ ಪಟ್ಟದ್ದೇವರ 27ನೇ ಸ್ಮರಣೋತ್ಸವ, ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ನಿಮಿತ್ತ ಹಿರೇಮಠ ಸಂಸ್ಥಾನ ಮತ್ತು ಅಮೃತ ಮಹೋತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ ರಾಷ್ಟ್ರಮಟ್ಟದ ಆಮಂತ್ರಿತ ವಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.

‘ಇಂದಿನ ಆಧುನಿಕ ಪ್ರಭಾವಕ್ಕೆ ಸಿಲುಕಿ ಯುವಕರು ತಮ್ಮ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ದೇಶದಲ್ಲಿ ಶೇ 30ರಷ್ಟು ಯುವಕರು ದುಶ್ಚಟಕ್ಕೆ ದಾಸರಾಗುತ್ತಿದ್ದಾರೆ. ಇನ್ನೂ ಶೇ 30ರಷ್ಟು ಯುವಕರು ಮೊಬೈಲ್, ಅಂತರ್ಜಾಲ ಬಳಕೆಯಿಂದ ದೈಹಿಕ ಮತ್ತು ಮಾನಸಿಕವಾಗಿ ದುರ್ಬಲರಾಗುತ್ತಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದರು.

ಸಾನ್ನಿಧ್ಯ ವಹಿಸಿದ್ದ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ‘ವಾಲಿಬಾಲ್ ಪಂದ್ಯಾವಳಿಯಲ್ಲಿ ನಿರ್ಣಾಯಕರು ಪಾರದರ್ಶಕವಾಗಿ ನಿರ್ಣಯ ನೀಡಿ ಕ್ರೀಡಾಪಟುಗಳಿಗೆ ಕ್ರೀಡಾ ಸ್ಪೂರ್ತಿ ತುಂಬಬೇಕು’ ಎಂದರು.

ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ವಾಲಿಬಾಲ್ ಪಂದ್ಯಾವಳಿ ಸಮಿತಿ ಉಪಾಧ್ಯಕ್ಷ ಸತ್ಯವಾನ ವೈರಾಗೆ ಮಾತನಾಡಿದರು. ವಾಲಿಬಾಲ್ ಪಂದ್ಯಾವಳಿ ಸಮಿತಿ ಅಧ್ಯಕ್ಷ ವಿಲಾಸ ಬಕ್ಕಾ, ಚನ್ನಬಸವ ಪಟ್ಟದ್ದೇವರು ಬ್ಯಾಂಕ್ನ ಅಧ್ಯಕ್ಷ ಡಿ.ಕೆ.ಸಿದ್ರಾಮ, ತುಮಕೂರು ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ, ವಿದ್ಯಾಭಾರತಿ ಪಬ್ಲಿಕ್ ಶಾಲೆಯ ಅಧ್ಯಕ್ಷ ರೋಹಿತ ವೈರಾಗೆ, ವಸಂತ ಪವಾರ, ವಾಲಿಬಾಲ್ ಪಂದ್ಯಾವಳಿ ಕೋಶಾಧ್ಯಕ್ಷ ಗಣಪತಿ ಬಾವುಗೆ, ಪ್ರಧಾನ ಕಾರ್ಯದರ್ಶಿ ರಂಗರಾವ್ ಜಾಧವ ಸೇರಿದಂತೆ ಅನೇಕರಿದ್ದರು.

ವಾಲಿಬಾಲ್ ಪಂದ್ಯಾವಳಿ ಕೋ-ಆಡಿನೇಟರ್ ಅಶ್ವಿನ ಭೋಸ್ಲೆ ಸ್ವಾಗತಿಸಿದರು. ದೀಪಕ ಠಮಕೆ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-33-422141816

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.