ಬ್ಯಾಡಗಿ: ಪಟ್ಟಣದಲ್ಲಿ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಮಹಿಳಾ ಕಬಡ್ಡಿ ಪಂದ್ಯಾವಳಿ ನಡೆಸಲು ಉದ್ದೇಶಿಸಲಾಗಿದೆ ಎಂದು ಹಾವೇರಿ ವಿವಿ ಉಪಕುಲಪತಿ ಸುರೇಶ ಜಂಗಮಶೆಟ್ಟಿ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬುಧವಾರದಿಂದ ಆರಂಭವಾದ ಹಾವೇರಿ ವಿವಿ ವ್ಯಾಪ್ತಿಯ ಪುರುಷ ಹಾಗೂ ಮಹಿಳಾ ಅಂತರ ಕಾಲೇಜು ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉದಯೋನ್ಮುಖ ಕ್ರೀಡಾಪಟುಗಳನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಹಾವೇರಿ ವಿವಿ ಕೆಲಸ ಮಾಡುತ್ತಿದೆ. ಪ್ರಥಮ ಬಾರಿಗೆ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಪಂದ್ಯಾವಳಿಗೆ ಶಾಸಕರ ಹಾಗೂ ಸಂಸದರ ನೆರವು ಕೋರಲಾಗುವುದು ಎಂದರು.

ಹಾವೇರಿ ವಿವಿ ಆವರಣದಲ್ಲಿ ಕ್ರೀಡಾ ಸಂಕೀರ್ಣ ಸಿದ್ಧಪಡಿಸಿ, ಒಂದೇ ಸೂರಿನಡಿ ಕ್ರೀಡಾ ತರಬೇತಿ ಶಿಬಿರಗಳು ಹಾಗೂ ಕ್ರೀಡೆಗಳನ್ನು ನಡೆಸಲು ಸರ್ಕಾರದ ಹೆಚ್ಚಿನ ಅನುದಾನದ ನಿರೀಕ್ಷೆಯಲ್ಲಿದ್ದೇವೆ. ಈ ವೇಳೆ ಪ್ರಾಚಾರ್ಯರಾದ ಮಲ್ಲಿಕಾರ್ಜುನ ಕಡ್ಡಿಪುಡಿ, ಮಂಜುನಾಥ ಪಾಟೀಲ, ಎನ್.ಬಿ.ನಾಗಲಾಪುರ, ವಿರೇಶ ಕುಮ್ಮೂರ, ಡಿ.ಟಿ.ಪಾಟೀಲ ಹಾಗೂ ಹಾವೇರಿ ಜಿಲ್ಲಾ ಅಮೇಚೂರ ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ಸಿ.ಜಿ.ಚಕ್ರಸಾಲಿ, ಕೋಚ್ ಮಂಜುಳಾ ಭಜಂತ್ರಿ ಹಾಗೂ ತೀರ್ಪುಗಾರ ಮಂಡಳಿ ಸದಸ್ಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-22-245216937

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.