ಬೈಂದೂರು: ಗ್ರಾಮೀಣ ಕ್ರೀಡಾ ಪ್ರತಿಭೆಗಳು ಲೆದರ್ ಬಾಲ್ ಕ್ರಿಕೆಟ್ ತರಬೇತಿ ಪಡೆದು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಮಿಂಚಲು ವಿಕ್ರಂ ಟ್ರೋಫಿಯಂತಹ ಕ್ರಿಕೆಟ್ ಟೂರ್ನಿಗಳು ಸಹಕಾರಿಯಾಗಿವೆ. ಎಳವೆಯಿಂದಲೇ ಉತ್ತಮ ತರಬೇತಿಯೊಂದಿಗೆ ಶಿಸ್ತು ಮೈಗೂಡಿಸಿಕೊಂಡು ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಿದಾಗ ಯಶಸ್ಸು ಸಾಧ್ಯ ಎಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಹೇಳಿದರು.

ಇಲ್ಲಿನ ಗಾಂಧಿ ಮೈದಾನದಲ್ಲಿ ವಿಕ್ರಂ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಭಾನುವಾರ ನಡೆದ ಉಡುಪಿ ಜಿಲ್ಲಾ ಇಂಟರ್ ಕ್ಯಾಂಪಸ್ ಅಕಾಡೆಮಿ ಆಟಗಾರರ ಅಂಡರ್ 23 ಲೆದರ್ ಬಾಲ್ ಟಿ-20 ನಾಕೌಟ್ ಮಾದರಿಯ ಕ್ರಿಕೆಟ್ ಟೂರ್ನಿ ‘ವಿಕ್ರಂ ಟ್ರೋಫಿ-2026’ರ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿಕ್ರಂ ಕ್ರಿಕೆಟ್ ಕ್ಲಬ್ ಗೌರವಾಧ್ಯಕ್ಷ ನಾಗರಾಜ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸೇನೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಿರೀಶ್ ಬೈಂದೂರು, ಏರೋಮ್ಯಾಕ್ಸ್ ಇಂಡಿಯಾ ಪ್ರೈ.ಲಿ. ಚೇರ್ಮನ್, ಸಿ.ಇ.ಒ. ಕರ್ನೋಲಿಯಸ್ ಪ್ರಸಾದ್, ಕ್ರಿಕೆಟ್ ತರಬೇತುದಾರ ವಿಜಯ ಆಳ್ವ, ಹಿರಿಯ ಕ್ರಿಕೆಟ್ ಆಟಗಾರ ಉದಯ ಕಟಪಾಡಿ, ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್ ಕಾರ್ಯದರ್ಶಿ ರೆನ್ ಟ್ರೆವರ್ ಡಯಾಸ್ ಇದ್ದರು.

ವಿಕ್ರಂ ಕ್ರಿಕೆಟ್ ಕ್ಲಬ್ ಅಧ್ಯಕ್ಷ ದಿನೇಶ್ ಗಾಣಿಗ ಸ್ವಾಗತಿಸಿದರು. ಶಿಕ್ಷಕ ಸುಬ್ರಹ್ಮಣ್ಯ ಜಿ. ಉಪ್ಪುಂದ ನಿರೂಪಿಸಿದರು.

ಜಿಲ್ಲೆಯ ಐದು ತಂಡಗಳು ಭಾಗವಹಿಸಿದ್ದವು. ಬಾಕಾ ಕೆ.ಆರ್.ಎಸ್.ಎ ಪ್ರಥಮ ಸ್ಥಾನ ಹಾಗೂ ನೇತಾಜಿ ಸ್ಪೋರ್ಟ್ಸ್ ಕ್ಲಬ್ ದ್ವಿತೀಯ ಸ್ಥಾನ ಗಳಿಸಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-28-27522489

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.