ಚಾಮರಾಜನಗರ: ಈಚೆಗೆ ನಡೆದ ಕ್ರೀಡಾಕೂಟದಲ್ಲಿ ಜೆಎಸ್ಎಸ್ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಉತ್ತಮ ಸಾಧನೆ ತೋರಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಟಿ.ಎಂ.ಮರಿಸ್ವಾಮಿ ತಿಳಿಸಿದರು.

ಕಾಲೇಜಿನಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ, ಕೊಳ್ಳೇಗಾಲದ ಮಾದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಜೆಎಸ್ಎಸ್ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಕ್ರೀಡಾಕೂಟದಲ್ಲಿ ಚಾಮರಾಜನಗರದ ಜೆಎಸ್ಎಸ್ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಬ್ಯಾಡ್ಮಿಂಟನ್, ಬ್ಯಾಲ್ ಬ್ಯಾಡ್ಮಿಂಟನ್ ಕಬ್ಬಡಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು ಕೊಕ್ಕೊ ಕ್ರೀಡೆಯಲ್ಲಿ ತೃತೀಯ ಬಹುಮಾನ ಪಡೆದಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಕಾಲೇಜಿನ ದೈಹಿಕ ನಿರ್ದೇಶಕ ಉಮೇಶ್ ಮಾತನಾಡಿ ವಿದ್ಯಾರ್ಥಿನಿಯರು ಕಠಿಣ ಅಭ್ಯಾಸ ಹಾಗೂ ಶ್ರಮದೊಂದಿಗೆ ಕ್ರೀಡೆಯಲ್ಲಿ ಭಾಗವಹಿಸಿದರೆ ಯಶಸ್ಸು ಖಚಿತವಾಗಿ ಸಿಗುತ್ತದೆ. ಕ್ರೀಡಾ ಕ್ಷೇತ್ರದಲ್ಲಿ ಮಹಿಳಾ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡುತ್ತಿದ್ದು ಕಾಲೇಜು ವಿದ್ಯಾರ್ಥಿನಿಯರಿಗೆ ಸ್ಫೂರ್ತಿಯಾಗಲಿ ಎಂದು ಆಶಿಸಿದರು.

ಚಾಮರಾಜನಗರ ವಿವಿ ಕ್ರೀಡಾ ಸಮಿತಿ ಸದಸ್ಯ ಜಿ.ಬಂಗಾರು ಮಾತನಾಡಿ ಜೆಎಸ್ಎಸ್ ಶಿಕ್ಷಣ ಸಂಸ್ಥೆ ಶಿಕ್ಷಣದ ಜೊತೆಗೆ, ಸಂಸ್ಕೃತಿ ಪರಿಚಯ, ಕ್ರೀಡೆಗಳಿಗೂ ಹೆಚ್ಚಿನ ಒತ್ತು ನೀಡುತ್ತಿರುವ ಪರಿಣಾಮ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಸಾಧಕರ ಮಹಿಳೆಯರನ್ನು ಅಭಿನಂದಿಸುವ ಮೂಲಕ ಪ್ರೋತ್ಸಾಹಿಸುತ್ತಿರುವ ಕಾರ್ಯವೂ ಅಭಿನಂದನೀಯ ಎಂದರು.

ಕಾಲೇಜು ಅಧೀಕ್ಷಕ ಗುರುಸ್ವಾಮಿ ಎಂ, ಪ್ರೊ.ನಟ ರಾಜ್, ಮಹಮದ್ ಜಬಿವುಲ್ಲಾ, ತ್ರಿವೇಣಿ, ಮಾನಸಾ, ಮಮತಾ, ಪೂಜಾ, ತನಯಾ, ರವಿಶಂಕರ್, ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ರಂಜಿತಾ, ಪಾರ್ವತಿ, ಸಂಗೀತಾ, ಮಂದಿರಾ, ಜ್ಯೋತಿಕಾ ಸೇರಿದಂತೆ ಮಹಿಳಾ ಕ್ರೀಡಾಪಟು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-37-1166725986

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.