ಚಿಂತಾಮಣಿ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶನಾಲಯದ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಅಂತರಕಾಲೇಜು ಕಬಡ್ಡಿ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ಬುಧವಾರ ನಡೆಯಿತು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ಪ್ರಾಂಶುಪಾಲೆ ಪ್ರೊ.ಡಿ.ವಿ. ಕುಸುಮಮಂಗಳ ಮಾತನಾಡಿ, ‘ವಿದ್ಯಾರ್ಥಿಗಳ ದೈಹಿಕ ಬೆಳವಣಿಗೆ ಮತ್ತು ಮಾನಸಿಕ ಏಕಾಗ್ರತೆಗಾಗಿ ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ’ ಎಂದು ಹೇಳಿದರು.

ಕ್ರೀಡೆಗಳಲ್ಲಿ ಸೋಲು–ಗೆಲುವಿಗಿಂತ ಭಾಗವಹಿಸುವುದು ಮುಖ್ಯ. ಸೋಲು–ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಸತತ ಅಭ್ಯಾಸ ಮಾಡಿದರೆ ಉತ್ತಮ ಸಾಧನೆ ಮಾಡಬಹುದು. ಕ್ರೀಡೆಯು ಶಿಕ್ಷಣದ ಅವಿಭಾಜ್ಯ ಅಂಗ. ಶೈಕ್ಷಣಿಕ ಚಟುವಟಿಕೆಗಳ ಜತೆಗೆ ಕಡ್ಡಾಯವಾಗಿ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಜಿತೇಂದ್ರ ಮಾತನಾಡಿ, ಕ್ರೀಡೆಗಳಿಂದ ಸ್ಪರ್ಧಾತ್ಮಕ ಮನೋಭಾವ, ಸ್ನೇಹ ಮನೋಭಾವ, ಪರಸ್ಪರ ಸಂಪರ್ಕ, ಬಾಂಧವ್ಯ, ನಾಯಕತ್ವದ ಗುಣ ಬೆಳೆಯುತ್ತದೆ. ದೈಹಿಕ ಶಕ್ತಿಯ ಜತೆಗೆ ಮನಸ್ಸಿನ ಏಕಾಗ್ರತೆ ಮೂಡುತ್ತದೆ. ಉತ್ತಮ ಕ್ರೀಡಾಪಟುಗಳಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗಗಳಲ್ಲಿ ಮೀಸಲಾತಿ ದೊರೆಯುತ್ತದೆ ಎಂದರು.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ 32 ಕಾಲೇಜು ತಂಡಗಳು ಭಾಗವಹಿಸಿದ್ದವು. ಗುರುವಾರವೂ ಪಂದ್ಯಾವಳಿಗಳು ನಡೆಯಲಿವೆ.

ದೈಹಿಕ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಆರ್.ಶ್ರೀಕಾಂತ್, ಐಕ್ಯುಎಸಿ ಸಂಚಾಲಕ ಪ್ರೊ. ಶಿವಶಂಕರ ಪ್ರಸಾದ್, ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಂ.ಪ್ರವೀಣ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಶ್ರೀನಿವಾಸ್, ವೆಂಕಟರವಣಪ್ಪ, ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-16-1575515750

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.