ದಾವಣಗೆರೆ: ನಗರದ ಡಿಸಿಎಂ ಬಡಾವಣೆಯ ಅನಿಲ್ ಕುಂಬ್ಳೆ ಒಳಾಂಗಣ ಕ್ರೀಡಾಂಗಣದಲ್ಲಿ 8ರಿಂದ 19 ವರ್ಷದ ಒಳಗಿನ ಬಾಲಕ ಮತ್ತು ಬಾಲಕಿಯರಿಗೆ ಟೆನಿಸ್ ಬಾಲ್ ಕ್ರಿಕೆಟ್ ತರಬೇತಿ ಶಿಬಿರವನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದು ಅನಿಲ್ ಕುಂಬ್ಳೆ ಕ್ರಿಕೆಟ್ ಅಕಾಡೆಮಿಯ ದಿನೇಶ್ ಕೆ. ಶೆಟ್ಟಿ ತಿಳಿಸಿದರು.

‘ಒಂದು ತಿಂಗಳಿಂದ ನಡೆಸಿದ ತರಬೇತಿ ಶಿಬಿರದಲ್ಲಿ 100ಕ್ಕೂ ಹೆಚ್ಚು ಕ್ರೀಡಾಪಟುಗಳು ತರಬೇತಿ ಪಡೆದಿದ್ದಾರೆ. ಪಾಲಕರು ಹಾಗೂ ಕ್ರಿಕೆಟ್ ಅಭಿಮಾನಿಗಳ ಕೋರಿಕೆಯ ಮೇರೆಗೆ ಮತ್ತೊಂದು ತಿಂಗಳು ತರಬೇತಿ ನೀಡಲು ಮುಂದಾಗಿದ್ದೇವೆ. ಕ್ರಿಕೆಟ್ ಪ್ರೇಮಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಅನುಭವಿ ತರಬೇತುದಾರರಾದ ತಿಮ್ಮೇಶ್ ಮತ್ತು ಗೋಪಾಲಕೃಷ್ಣ ತರಬೇತಿ ನೀಡಲಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಫೋನ್ 99808-80686, 91135-37332 ಸಂಪರ್ಕಿಸಬಹುದು’ ಎಂದರು.

ತರಬೇತುದಾರ ತಿಮ್ಮೇಶ್, ಅಕಾಡೆಮಿಯ ಸುನೀಲ್, ಯುವರಾಜ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-43-424674153

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.