ದಾವಣಗೆರೆ: ‘ನಗರದ ನಿಜಲಿಂಗಪ್ಪ ಬಡಾವಣೆಯ ದೇವನಗರಿ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಫುಟ್ಬಾಲ್ ಹಾಗೂ ಜಿಲ್ಲಾ ಮಟ್ಟದ ಕ್ರಿಕೆಟ್ ಟೂರ್ನಿಯನ್ನು ಮೇ 9ರಿಂದ 17ರವರೆಗೆ ಹಮ್ಮಿಕೊಳ್ಳಲಾಗಿದೆ’ ಎಂದು ದೇವನಗರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಆರ್. ಚಂದ್ರಶೇಖರ್ ತಿಳಿಸಿದರು.

‘ಬಿಜೆಪಿ ಮುಖಂಡ ಶಿವನಳ್ಳಿ ರಮೇಶ್ ಅವರು ಮೇ 9ರಂದು ಬೆಳಿಗ್ಗೆ 8.30ಕ್ಕೆ ಟೂರ್ನಿಗೆ ಚಾಲನೆ ನೀಡಲಿದ್ದಾರೆ. ಸಂಘದ ಅಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಪಾಲ್ಗೊಳ್ಳಲಿದ್ದಾರೆ. ಫುಟ್ಬಾಲ್ ಟೂರ್ನಿಯಲ್ಲಿ ಗೋವಾ, ಕೇರಳ ಸೇರಿ ಹಲವು ರಾಜ್ಯಗಳ ತಂಡಗಳು ಭಾಗವಹಿಸಲಿವೆ. ಪ್ರಥಮ ₹ 15,000, ದ್ವಿತೀಯ ಬಹುಮಾನ ₹ 8,000 ಮತ್ತು ಟ್ರೋಫಿ ನೀಡಲಾಗುತ್ತದೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಕ್ರಿಕೆಟ್ ಟೂರ್ನಿಗೆ ₹ 15,000 ಪ್ರಥಮ, ₹ 8,000 ದ್ವಿತೀಯ, ಮಿನಿ ಕ್ರಿಕೆಟ್ ಟೂರ್ನಿಗೆ ₹ 20,000 ಪ್ರಥಮ ಹಾಗೂ ₹ 10,000 ದ್ವಿತೀಯ ಬಹುಮಾನ ಮತ್ತು ಟ್ರೋಫಿ ನೀಡಲಾಗುವುದು. ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಮೇ 17ರಂದು ಸಂಜೆ 5ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ’ ಎಂದು ಹೇಳಿದರು.

ಸಂಘದ ಸಹಕಾರ್ಯದರ್ಶಿಗಳಾದ ವಿ.ಆನಂದ್, ಸಂದೇಶ ನಾಯಕ, ಡಿ.ಆರ್.ದೊಡ್ಡಪ್ಪ, ಕೆ.ಎಂ. ವಾಗೀಶ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-43-649713059

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.