ದೇವನಹಳ್ಳಿ: ವೇಣುಗೋಪಾಲಸ್ವಾಮಿ ಒಳಾಂಗಣ ಕ್ರೀಡಾಂಗಣ ಸಂಘದಿಂದ ಮಂಗಳವಾರ ಆಯೋಜಿಸಿದ್ದ 50 ವರ್ಷಕ್ಕಿಂತ ಕಡಿಮೆ ಹಾಗೂ 50 ವರ್ಷ ಮೇಲ್ಪಟ್ಟವರ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್–2026ರ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

50 ವರ್ಷಕ್ಕಿಂತ ಕಡಿಮೆ ವಯೋಮಿತಿಯಲ್ಲಿ ಅಭಿ–ಅಕ್ಷಯ್ ಪ್ರಥಮ, ವೆಂಕಿ–ಬಾಬು ದ್ವಿತೀಯ, ಪ್ರಜ್ವಲ್–ಚಿರಾಗ್ ತೃತೀಯ, ಪರಿಣಿತ್ –ಚಮಂತ್ ನಾಲ್ಕವೇ ಸ್ಥಾನ ಪಡೆದರು.

50 ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಕೆ. ಮಂಜು–ವೇಣುಗೋಪಾಲ್ ಪ್ರಥಮ, ಲಕ್ಷ್ಮೀನಾರಾಯಣ್–ರಾಜು ದ್ವಿತೀಯ, ಎಸ್.ಆರ್. ರವಿಕುಮಾರ್ –ನಟರಾಜ್ ತೃತೀಯ, ಮಹೇಶ್ –ಗೋಪಾಲ್ ಚತುರ್ಥ ಸ್ಥಾನ ಪಡೆದರು.

ಬಹುಮಾನ ವಿತರಿಸಿ ಮಾತನಾಡಿದ ಸಂಘದ ಅಧ್ಯಕ್ಷ ಕೆ. ಮಂಜು, ಶಟಲ್ ಬ್ಯಾಡ್ಮಿಂಟನ್ಂತಹ ಕ್ರೀಡೆಗಳು ದೈಹಿಕ ಆರೋಗ್ಯ ಕಾಪಾಡಲು ಸಹಕಾರಿಯಾಗುತ್ತವೆ. ಕ್ರೀಡೆಗಳಲ್ಲಿ ಸೋಲು–ಗೆಲುವಿಗಿಂತ ಭಾಗವಹಿಸುವ ಮನೋಭಾವ ಮುಖ್ಯ ಎಂದರು.

ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್.ಆರ್. ರವಿಕುಮಾರ್, ಪ್ರತಿಯೊಬ್ಬರೂ ಕ್ರೀಡಾ ಮನೋಭಾವ ಬೆಳೆಸಿಕೊಂಡು ಸೋಲು–ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುವ ಗುರಿ ಹೊಂದಬೇಕು ಎಂದು ತಿಳಿಸಿದರು.

ಸಂಘದ ಮಾಜಿ ಅಧ್ಯಕ್ಷ ಎನ್. ರಘು, ಯುವಕರು ದುಶ್ಚಟಗಳಿಂದ ದೂರವಿದ್ದು ಕ್ರೀಡೆಗಳತ್ತ ಗಮನ ಹರಿಸಬೇಕು. ಸಂಘದಲ್ಲಿ ಕ್ರೀಡಾಪಟುಗಳಿಗೆ ಉತ್ತಮ ತರಬೇತಿ ಮತ್ತು ಮಾರ್ಗದರ್ಶನ ನೀಡಲಾಗುತ್ತಿದ್ದು, ಅದರ ಸದುಪಯೋಗ ಪಡೆದು ಜಿಲ್ಲೆಗೆ ಕೀರ್ತಿ ತರಬೇಕು ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-15-1614623737

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.