ಗದಗ: ‘ಕಬಡ್ಡಿಯಂತಹ ದೇಸಿ ಕ್ರೀಡೆಗಳು ಭಾರತೀಯ ಸಂಸ್ಕೃತಿ, ದೈಹಿಕ ಸಾಮರ್ಥ್ಯ ಮತ್ತು ತಂಡ ಮನೋಭಾವದ ಪ್ರತೀಕವಾಗಿವೆ’ ಎಂದು ಎಸ್ಟಿಎಸ್ಕೆಕೆ ಸಂಸ್ಥೆಯ ಕಾರ್ಯದರ್ಶಿ ಎಸ್.ಎಸ್.ಪಟ್ಟಣಶೆಟ್ಟಿ ಹೇಳಿದರು.

ನಗರದ ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ವಿಟಿಯು ಬೆಳಗಾವಿ ವಿಭಾಗ ಮಟ್ಟದ ಅಂತರ ಕಾಲೇಜು ಪುರುಷರ ಕಬಡ್ಡಿ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

‘ವಿದ್ಯಾರ್ಥಿ ಜೀವನದಲ್ಲಿ ದೈಹಿಕ ಚಟುವಟಿಕೆಗಳಿಗೆ ಮಹತ್ವವಿದೆ. ಕ್ರೀಡೆಗಳು ಆರೋಗ್ಯ ನೀಡುವುದರ ಜತೆಗೆ ಶಿಸ್ತು, ಸಹಕಾರ ಮತ್ತು ಸೋಲು-ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುವ ಮನೋಭಾವವನ್ನು ಬೆಳೆಸುತ್ತವೆ’ ಎಂದರು.

‘ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬ ಆಟಗಾರನು ಉತ್ತಮ ಕ್ರೀಡಾಸ್ಫೂರ್ತಿಯನ್ನು ಪ್ರದರ್ಶಿಸಿ ಸ್ಪರ್ಧೆಯನ್ನು ಸ್ಮರಣೀಯವಾಗಿಸಬೇಕು’ ಎಂದು ಹೇಳಿದರು.

ಅಂತಿಮ ಪಂದ್ಯದಲ್ಲಿ ವಿಟಿಯು ಪಿಜಿ ಸೆಂಟರ್, ಬೆಳಗಾವಿ ತಂಡವು ಅಂಗಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್ಮೆಂಟ್, ಬೆಳಗಾವಿ ತಂಡವನ್ನು 31-21 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಕೆಎಲ್ಇ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ತಂಡ ಮೂರನೇ ಸ್ಥಾನ ಪಡೆದುಕೊಂಡರೆ, ಕೆಎಲ್ಎಸ್ ವಿ.ಡಿ.ಆರ್.ಐ.ಟಿ. ಹಳಿಯಾಳ ತಂಡ ನಾಲ್ಕನೇ ಸ್ಥಾನ ಪಡೆಯಿತು.

ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಎಂ.ಅವಟಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು.

ಉಪ ಪ್ರಾಂಶುಪಾಲ ಡಾ. ಜಿ.ಡಿ.ರೇವಣ್ಕರ್, ಸಿಎಸ್ಡಿ ವಿಭಾಗದ ಮುಖ್ಯಸ್ಥ ಡಾ. ವಿಜಯಕುಮಾರ ಮಾಲಗಿತ್ತಿ, ಸಿಎಸ್ ವಿಭಾಗದ ಮುಖ್ಯಸ್ಥ ಡಾ. ರಮೇಶ ಬಡಿಗೇರ, ಡಾ. ಮಲ್ಲಿಕಾರ್ಜುನ, ದೈಹಿಕ ಶಿಕ್ಷಣ ನಿರ್ದೇಶಕ ವೀರೇಶ ಸೂಡಿ, ಕ್ರೀಡಾ ಸಂಯೋಜಕ ಪ್ರೊ. ಬಸನಗೌಡ ಪಾಟೀಲ ಇದ್ದರು.

ಬೆಳಗಾವಿ ವಿಭಾಗದ ವಿವಿಧ ಎಂಜಿನಿಯರಿಂಗ್ ಕಾಲೇಜುಗಳ 16 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-23-1527529156

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.