ಗದಗ: ನಗರದಲ್ಲಿ ಸುಸಜ್ಜಿತ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಿ, 2030ರ ವೇಳೆಗೆ ಗದಗದಲ್ಲಿ ರಣಜಿ ಪಂದ್ಯ ನಡೆಸಲು ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಹೇಳಿದರು.

ನಗರದಲ್ಲಿ ಭಾನುವಾರ ರಾತ್ರಿ ನಡೆದ ಕೆ.ಎಚ್.ಪಾಟೀಲ ಕ್ರಿಕೆಟ್ ಲೀಗ್ನ ಎರಡನೇ ಆವೃತ್ತಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

‘ನಮ್ಮ ನಗರದಲ್ಲೂ ರಣಜಿ ಪಂದ್ಯಗಳು ನಡೆಯಬೇಕು. ಅದಕ್ಕಾಗಿ ಒಂದು ಸುಸಜ್ಜಿತ ಸ್ಟೇಡಿಯಂ ಇರಬೇಕು. ಈ ಕಾರಣದಿಂದಲೇ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ 12 ಎಕರೆ ಜಮೀನು ನೀಡಲಾಗಿದೆ’ ಎಂದು ಹೇಳಿದರು.

‘ಗದಗ ಜಿಲ್ಲೆಯಲ್ಲಿ ಉತ್ತಮ ಕ್ರಿಕೆಟ್ ಕ್ರೀಡಾಪಟುಗಳು ಇದ್ದಾರೆ. ಸರಿಯಾದ ತರಬೇತಿ, ಸೌಕರ್ಯಗಳು ಸಿಕ್ಕರೆ ಅಂತರರಾಷ್ಟ್ರೀಯ ಮಟ್ಟಕ್ಕೆ ಬೆಳೆಯುವ ಪ್ರತಿಭೆಗಳು ಸಾಕಷ್ಟು ಮಂದಿ ಇದ್ದಾರೆ. ಈಗ ನಡೆಯುತ್ತಿರುವ ಲೀಗ್ ಪಂದ್ಯಗಳು ಅದಕ್ಕೆ ವೇದಿಕೆ ಒದಗಿಸಲಿದೆ’ ಎಂದು ಹೇಳಿದರು.

ಕೆಎಸ್ಸಿಎ ಧಾರವಾಡ ವೃತ್ತದ ಸಂಯೋಜಕ ವೀರಣ್ಣ ಸವಡಿ ಮಾತನಾಡಿ, ‘ಸಚಿವ ಎಚ್.ಕೆ. ಪಾಟೀಲ ಅವರ ಆಶಯದಂತೆ 2030ರೊಳಗೆ ರಣಜಿ ಪಂದ್ಯಕ್ಕೆ ಮೈದಾನ ಸಜ್ಜುಗೊಳಿಸಲು ಪ್ರಯತ್ನಿಸಲಾಗುವುದು’ ಎಂದು ಹೇಳಿದರು.

ಮಾಜಿ ಶಾಸಕ ಡಿ.ಆರ್. ಪಾಟೀಲ, ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಎಚ್.ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ಮಂದಾಲಿ, ಮಿಥುನ್ ಪಾಟೀಲ ಸೇರಿದಂತೆ ಅನೇಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-23-438606634

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.