ಗೋಣಿಕೊಪ್ಪಲು: ಇಲ್ಲಿನ ಬ್ಯಾಸ್ಕೆಟ್ ಬಾಲ್ ಕ್ಲಬ್ ವತಿಯಿಂದ ಕಾವೇರಿ ಕಾಲೇಜಿನ ಚೆಕ್ಕೇರ ಮುತ್ತಣ್ಣ ಒಳಾಂಗಣ ಕ್ರೀಡಾಂಗಣದಲ್ಲಿ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಉಚಿತ ಬ್ಯಾಸ್ಕೆಟ್ ಬಾಲ್ ತರಬೇತಿ ಶಿಬಿರ ಮುಕ್ತಾಯಗೊಂಡಿತು.

13 ದಿನಗಳ ಕಾಲ ನಡೆದ ತರಬೇತಿ ಶಿಬಿರದಲ್ಲಿ 30 ಮಕ್ಕಳು ಪಾಲ್ಗೊಂಡು ತರಬೇತಿ ಪಡೆದರು. ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಹಿರಿಯ ಬ್ಯಾಸ್ಕೆಟ್ ಬಾಲ್ ಆಟಗಾರ ಬಾಳೆಯಡ ಕೆ. ಉತ್ತಯ್ಯ, ಬ್ಯಾಸ್ಕೆಟ್ ಬಾಲ್ ಕ್ಲಬ್ ಆಟಗಾರರನ್ನು ತಯಾರು ಮಾಡುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಶ್ಲಾಘಿಸಿದರು.

ಮಕ್ಕಳು ತರಬೇತಿ ಮುಗಿಸಿ ಮನೆಯಲ್ಲಿ ಸುಮ್ಮನೆ ಕೂರುವ ಬದಲು, ಪ್ರತಿದಿನ ಚಟುವಟಿಕೆಯಿಂದ ಅಭ್ಯಾಸ ಮಾಡುವ ಮೂಲಕ ತಮ್ಮ ದೈಹಿಕ ಸಾಮರ್ಥ್ಯ ಕಾಪಾಡಿಕೊಳ್ಳಬೇಕು. ದೈಹಿಕವಾಗಿ ಸಮರ್ಥರಾಗಿದ್ದಾಗ ಮಾತ್ರ ಆಟೋಟಗಳಲ್ಲಿ ಭಾಗವಹಿಸಲು ಸಾಧ್ಯ ಎಂದು ಸಲಹೆ ನೀಡಿದರು.

ಬ್ಯಾಸ್ಕೆಟ್ ಬಾಲ್ ಕ್ಲಬ್ ಅಧ್ಯಕ್ಷ ಕರ್ನಲ್ ಬಾಳೆಯಡ ಸುಬ್ರಮಣಿ ಮಾತನಾಡಿ, ದೈಹಿಕ ಕ್ಷಮತೆ ಉತ್ತಮವಾಗಿದ್ದರೆ ಸಾಧನೆಗೆ ಹೆಚ್ಚಿನ ಅವಕಾಶಗಳಿರುತ್ತವೆ. ತರಬೇತಿಯಿಂದ ಪಡೆದ ಕೌಶಲವನ್ನು ಕ್ರೀಡೆಯಲ್ಲಿ ಬಳಸಿಕೊಂಡು ವೃತ್ತಿ ಜೀವನದಲ್ಲೂ ಸಾಧನೆ ಮಾಡಲು ಸಾಧ್ಯ. ಕ್ರೀಡೆಯೊಂದಿಗೆ ಮುನ್ನಡೆಯುವ ಹವ್ಯಾಸವನ್ನು ಯುವಕರು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಬಿ.ಬಿ.ಸಿ ಕ್ಲಬ್ ಮೂಲಕ ಸಾವಿರಾರು ಕ್ರೀಡಾಪಟುಗಳು ತಮ್ಮ ಭವಿಷ್ಯ ನಿರ್ಮಿಸಿಕೊಂಡಿದ್ದಾರೆ ಎಂದು ಹೇಳಿದರು.

ಕ್ಲಬ್ ಉಪಾಧ್ಯಕ್ಷೆ ಪಳಂಗಂಡ ವಾಣಿ ಚಂಗಪ್ಪ ಮತನಾಡಿದರು. ಕ್ಲಬ್ ಕಾರ್ಯದರ್ಶಿ ಚೆಪ್ಪುಡೀರ ಅಪ್ಪಣ್ಣ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-51-343790465

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.