ಹಾಸನ: ಪ್ರಥಮ ಬಾರಿಗೆ ರಾಜ್ಯಮಟ್ಟದ ಸಬ್ ಜೂನಿಯರ್ ಪುರುಷರು ಹಾಗೂ ಮಹಿಳೆಯರ ಕ್ಲಾಸಿಕ್ ಮತ್ತು ಎಕ್ವಿಪ್ಡ್ ಪವರ್ ಲಿಫ್ಟಿಂಗ್ ಚಾಂಪಿಯನ್ಷಿಪ್–2026 ಅನ್ನು ನಗರದ ಅಂಬೇಡ್ಕರ್ ಭವನದಲ್ಲಿ ಏಪ್ರಿಲ್ 25 ಮತ್ತು 26ರಂದು ಆಯೋಜಿಸಲಾಗಿದೆ ಎಂದು ಹಾಸನ ಜಿಲ್ಲಾ ಪವರ್ಲಿಫ್ಟಿಂಗ್ ಸಂಸ್ಥೆಯ ಅಧ್ಯಕ್ಷ ವಿಜಯ್ ಕುಮಾರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲಾ ಪವರ್ಲಿಫ್ಟಿಂಗ್ ಸಂಸ್ಥೆ, ಕರ್ನಾಟಕ ಪವರ್ಲಿಫ್ಟಿಂಗ್ ಸಂಸ್ಥೆ (ಮಂಗಳೂರು) ಹಾಗೂ ಟೈಮ್ಸ್ ಗುರುಕುಲ ಇಂಟರ್ನ್ಯಾಷನಲ್ ಸಹಯೋಗದಲ್ಲಿ ಈ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.

ಎರಡು ದಿನ ನಡೆಯುವ ಈ ಚಾಂಪಿಯನ್ಷಿಪ್ನಲ್ಲಿ ವಿವಿಧ ತೂಕ, ವರ್ಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಪ್ರತಿ ವಿಭಾಗದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳ ವಿಜೇತರಿಗೆ ಪದಕ ಮತ್ತು ಪ್ರಮಾಣಪತ್ರ ಪ್ರದಾನ ಮಾಡಲಾಗುತ್ತದೆ. ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ರಾಷ್ಟ್ರಮಟ್ಟದ ಸ್ಪರ್ಧೆಗಳಿಗೆ ಆಯ್ಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಕ್ಲಾಸಿಕ್ ಹಾಗೂ ಎಕ್ವಿಪ್ಡ್ ವಿಭಾಗಗಳಲ್ಲಿ ‘ಕರ್ನಾಟಕ ಬೆಸ್ಟ್ ಲಿಫ್ಟರ್’ ಪ್ರಶಸ್ತಿಯೂ ನೀಡಲಾಗುತ್ತದೆ. ರಾಷ್ಟ್ರಮಟ್ಟದ ತೀರ್ಪುಗಾರರು ಸ್ಪರ್ಧೆ ನಿರ್ವಹಿಸಲಿದ್ದು, ಪಾರದರ್ಶಕತೆ ಕಾಪಾಡಲಾಗುತ್ತದೆ. ತಂಡ ಚಾಂಪಿಯನ್ಷಿಪ್ ಪ್ರಶಸ್ತಿಯನ್ನೂ ನೀಡಲಾಗುತ್ತದೆ ಎಂದು ಹೇಳಿದರು. ಕ್ರೀಡಾಪಟುಗಳು ಸಿಂಪ್ಲೆಟ್, ಉದ್ದನೆಯ ಸಾಕ್ಸ್, ಶೂ ಮತ್ತು ಬೆಲ್ಟ್ ಧರಿಸುವುದು ಕಡ್ಡಾಯವಾಗಿದೆ. ಜಿಲ್ಲೆಯ ಹೆಚ್ಚಿನ ಕ್ರೀಡಾಪಟುಗಳು ಭಾಗವಹಿಸಿ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಸಬ್ಜೂನಿಯರ್ ಪುರುಷರ ವಿಭಾಗದಲ್ಲಿ 53 ಕೆ.ಜಿ.ಯಿಂದ 120+ ಕೆ.ಜಿ.ವರೆಗೆ ಹಾಗೂ ಮಹಿಳೆಯರ ವಿಭಾಗದಲ್ಲಿ 43 ಕೆ.ಜಿ. ಯಿಂದ 84+ ಕೆ.ಜಿ.ವರೆಗೆ ತೂಕ ವರ್ಗಗಳನ್ನು ನಿಗದಿಪಡಿಸಲಾಗಿದೆ. ಜಿಲ್ಲೆಯ ವ್ಯಾಯಾಮ ಶಾಲೆಗಳವರು ಪವರ್ಲಿಫ್ಟಿಂಗ್ ಸಂಸ್ಥೆಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9483467084, 9945763698, 9964182654 ಸಂಪರ್ಕಿಸಲು ಕೋರಿದರು. ಹನುಮಂತೇಗೌಡ, ನಿರಂಜನ್ ರಾಜ್, ತ್ರಿಭುವನ್ ಗೌಡ, ಅಶ್ವತ್, ಸಂತೋಷ್ ಶೆಟ್ಟಿ, ಶಿವಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-36-243778236

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.