ಹಾಸನ: ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ಮೊದಲ ಬಾರಿಗೆ ನಗರದ ಕಲಾ ಮತ್ತು ವಿಜ್ಞಾನ ಕಾಲೇಜು ಮೈದಾನಗಳಲ್ಲಿ ಹಮ್ಮಿಕೊಂಡಿದ್ದ ಅಧಿಕಾರಿಗಳ ಹಾಗೂ ಪತ್ರಕರ್ತರ ಕ್ರಿಕೆಟ್ ಸಮ್ಮಿಲನ ಎರಡು ದಿನಗಳ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಭಾನುವಾರ ಆರೋಗ್ಯ ಇಲಾಖೆ ತಂಡ ವಿಜಯಭೇರಿ ಬಾರಿಸಿತು.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರೋಗ್ಯ ಇಲಾಖೆ ತಂಡ, ಸಂಘಟಿತ ಆಟದ ಮೂಲಕ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಆರಂಭದಿಂದಲೂ ಉತ್ತಮ ಆಟ ಆಡುವ ಮೂಲಕ ಸೋಲರಿಯದೆ ಫೈನಲ್ ಪ್ರವೇಶಿಸಿದ್ದ ಜಿಲ್ಲಾ ಪತ್ರಕರ್ತರ ಸಂಘ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿ ಪಟ್ಟುಕೊಂಡಿತು. ಪೊಲೀಸ್ ಇಲಾಖೆ ತಂಡ ಮೂರನೇ ಬಹುಮಾನ ಪಡೆಯಿತು.

ವಿಜೇತ ತಂಡಕ್ಕೆ ₹25 ಸಾವಿರ ನಗದು ಬಹುಮಾನ ಹಾಗೂ ಟ್ರೋಫಿ, ರನ್ನರ್ ಅಪ್ ತಂಡಕ್ಕೆ ₹15 ಸಾವಿರ ನಗದು ಹಾಗೂ ಟ್ರೋಫಿ, ತೃತೀಯ ಬಹುಮಾನ ಪಡೆದ ತಂಡಕ್ಕೆ ₹10 ಸಾವಿರ ನಗದು ಮತ್ತು ಟ್ರೋಫಿ ವಿತರಿಸಿ ಅಭಿನಂದಿಸಲಾಯಿತು.

ಬೆಸ್ಟ್ ಬ್ಯಾಟರ್ ಗೌರವಕ್ಕೆ ಆರೋಗ್ಯ ಇಲಾಖೆಯ ಅನಿಲ್ ಪಾತ್ರರಾದರೆ, ಹರೀಶ್ ಬಾಬು ಉತ್ತಮ ಬೌಲರ್ ಎನಿಸಿಕೊಂಡರು. ಅಭಿಜಿತ್ ಸರಣಿ ಶ್ರೇಷ್ಠ ಬಹುಮಾನ ಪಡೆದರು.

ಬಹುಮಾನ ವಿತರಿಸಿ ಮಾತನಾಡಿದ ಪತ್ರಕರ್ತರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಎಚ್.ಬಿ. ಮದನಗೌಡ, ಪತ್ರಕರ್ತರ ತಂಡ ಸೇರಿ ಒಟ್ಟು 15 ಇಲಾಖೆಗಳು ಭಾಗಿಯಾಗಿದ್ದ ಕ್ರಿಕೆಟ್ ಸಮ್ಮಿಲನ ನಿಜಕ್ಕೂ ಅರ್ಥಪೂರ್ಣವಾಗಿತ್ತು. ಇದರ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಹೇಳಿದರು.

ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜೆ.ಆರ್.ಕೆಂಚೇಗೌಡ ಮಾತನಾಡಿ, ಮೊದಲ ಬಾರಿಗೆ ಆಯೋಜನೆ ಮಾಡಿದ್ದ ಪಂದ್ಯಾವಳಿ ಯಾವುದೇ ಸಣ್ಣಪುಟ್ಟ ಲೋಪ ಇಲ್ಲದೇ ಅಚ್ಚುಕಟ್ಟಾಗಿ ಮುಗಿದಿದೆ. ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಇದಕ್ಕೂ ಮುನ್ನ ತಂಡಗಳಿಗೆ ಅಭಿನಂದಿಸಿ ಮಾತನಾಡಿದ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು, ಇಷ್ಟೊಂದು ತಂಡಗಳನ್ನು ಒಗ್ಗೂಡಿಸಿ ಪಂದ್ಯಾವಳಿ ಆಯೋಜನೆ ಮಾಡುವುದು ಸುಲಭದ ಕೆಲಸ ಅಲ್ಲ. ಪ್ರಥಮ ಪ್ರಯತ್ನದಲ್ಲೇ ಇಂಥದ್ದೊಂದು ಅದ್ಭುತ ಹಾಗೂ ಅರ್ಥಪೂರ್ಣ, ಯಶಸ್ವಿ ಪಂದ್ಯಾವಳಿ ಆಯೋಜನೆ ಮಾಡಿರುವುದು ಶ್ಲಾಘನೀಯ ಎಂದರು.

ಮಾಜಿ ಅಧ್ಯಕ್ಷರಾದ ರವಿ ನಾಕಲಗೂಡು, ಬಿ.ಆರ್.ಉದಯಕುಮಾರ್, ಬಾಳ್ಳುಗೋಪಾಲ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಕೆ.ಪಿ.ಎಸ್.ಪ್ರಮೋದ್ ಮಾತನಾಡಿದರು. ಬ್ಯಾಂಕ್ ನೌಕರರ ಸಂಘದ ಪರಮಶಿವಯ್ಯ, ಸಂಘದ ಉಪಾಧ್ಯಕ್ಷರಾದ ಎನ್.ನಂಜುಂಡೇಗೌಡ, ಜಿ.ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಕೆ.ಜಿ.ಸುರೇಶ್, ಕಾರ್ಯದರ್ಶಿಗಳಾದ ಕೆ.ಎಂ.ಹರೀಶ್, ಖುಷ್ವಂತ್, ಖಜಾಂಚಿ ಬೆಳವಾಡಿ ಪ್ರಕಾಶ್ ಹಾಗೂ ಕ್ರೀಡಾ ಸಮಿತಿಯ ಸದಸ್ಯರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-36-1522635006

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.