ಹಾಸನ: ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ಮೇ 9 ಮತ್ತು 10ರಂದು ನಗರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು ಮೈದಾನದಲ್ಲಿ ಪತ್ರಕರ್ತರು-ಅಧಿಕಾರಿಗಳ ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜೆ.ಆರ್.ಕೆಂಚೇಗೌಡ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 9 ರಂದು ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡರ ಉಪಸ್ಥಿತಿಯಲ್ಲಿ ಸಚಿವ ಕೃಷ್ಣ ಬೈರೇಗೌಡ ಪಂದ್ಯಕ್ಕೆ ಚಾಲನೆ ನೀಡುವರು. ಶಾಸಕ ಸ್ವರೂಪ್ ಪ್ರಕಾಶ್ ಉದ್ಘಾಟಿಸುವರು. ಸಂಸದ ಶ್ರೇಯಸ್ ಪಟೇಲ್ ಕ್ರೀಡಾಕೂಟಕ್ಕೆ ಚಾಲನೆ ನೀಡುವರು. ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು ದಿಕ್ಸೂಚಿ ಭಾಷಣ ಮಾಡುವರು ಎಂದು ತಿಳಿಸಿದರು.

ಅತಿಥಿಗಳಾಗಿ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಶಾಸಕರಾದ ಸಿ.ಎನ್.ಬಾಲಕೃಷ್ಣ. ಎಚ್.ಕೆ.ಸುರೇಶ್, ಸಿಮೆಂಟ್ ಮಂಜು, ವಿಧಾನ ಪರಿಷತ್ ಸದಸ್ಯರಾದ ಡಾ.ಸೂರಜ್ ರೇವಣ್ಣ, ಮಧು ಜಿ.ಮಾದೇಗೌಡ, ವಿವೇಕಾನಂದ, ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ ಭಾಗವಹಿಸಲಿದ್ದಾರೆ. ಡಿಸಿ ಕೆ.ಎಸ್.ಲತಾಕುಮಾರಿ, ಎಸ್ಪಿ ಶುಭನ್ವಿತಾ ತಂಡ ಪರಿಚಯಿಸಲಿದ್ದು, ಉದ್ಯಮಿ ಕಂಚಮಾರನಹಳ್ಳಿ ಕಾಂತಣ್ಣ ಭಾಗವಹಿಸಲಿದ್ದಾರೆ ಎಂದರು.

ಒಟ್ಟು 16 ತಂಡಗಳು ಭಾಗವಹಿಸಲಿವೆ. ವಿಜೇತ ತಂಡಕ್ಕೆ ₹25 ಸಾವಿರ ನಗದು ಹಾಗೂ ಟ್ರೋಫಿ, ರನ್ನರ್ ಅಪ್ ತಂಡಕ್ಕೆ ₹15 ಸಾವಿರ ಹಾಗೂ ಟ್ರೋಫಿ, ತೃತೀಯ ಸ್ಥಾನ ಪಡೆದ ತಂಡಕ್ಕೆ ₹10 ಸಾವಿರ ನಗದು ಮತ್ತು ಟ್ರೋಫಿ ನೀಡಲಾಗುವುದು ಎಂದು ವಿವರಿಸಿದರು.

ಶಾಸಕ ಎಚ್.ಡಿ.ರೇವಣ್ಣ ಸಮಾರೋಪ ಭಾಷಣ ಮಾಡಲಿದ್ದು, ಶಾಸಕ ಎ.ಮಂಜು ಬಹುಮಾನ ವಿತರಣೆ ಮಾಡುವರು ಎಂದರು. ಉಪಾಧ್ಯಕ್ಷ ಎನ್.ನಂಜುಂಡೇಗೌಡ, ಜಿ.ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಕೆ.ಜಿ.ಸುರೇಶ್, ಖಜಾಂಚಿ ಪ್ರಕಾಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-36-1277501209

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.