ಹಾಸನ: ಹಾಸನ ವಿಶ್ವವಿದ್ಯಾಲಯ ಅಂತರ ಕಾಲೇಜುಗಳ ಕ್ರೀಡಾಕೂಟದ ಹ್ಯಾಂಡ್ ಬಾಲ್ ಹಾಗೂ ಬ್ಯಾಸ್ಕೆಟ್ಬಾಲ್ ಕ್ರೀಡಾಕೂಟಗಳಲ್ಲಿ ನಗರದ ಆರ್.ಸಿ. ರಸ್ತೆ ಗಂಧದ ಕೋಠಿ ಆವರಣದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದಿದ್ದಾರೆ.

ನಗರದ ಜಿಲ್ಲಾ ಕ್ರೀಡಾಂಗಣ ದಲ್ಲಿ ಈಚೆಗೆ ನಡೆದ ಹ್ಯಾಂಡ್ ಬಾಲ್ ಹಾಗೂ ಬ್ಯಾಸ್ಕೆಟ್ ಬಾಲ್ ಅಂತಿಮ ಹಣಾಹಣಿಯಲ್ಲಿ ಎಂ.ಜಿ. ರಸ್ತೆ ಮಹಿಳಾ ಸರ್ಕಾರಿ ಕಾಲೇಜಿನೊಂದಿಗೆ ಸೆಣಸಾಟ ನಡೆಸಿದ ಆರ್.ಸಿ. ರಸ್ತೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು, ಎರಡೂ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಚ್.ವಿ. ಮುರಳಿ ಮಾರ್ಗದರ್ಶನದಲ್ಲಿ ಕ್ರೀಡಾಪಟುಗಳು ತರಬೇತಿ ಪಡೆದುಕೊಂಡಿದ್ದರು. ವಿಜೇತ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲ ಡಿ.ಕೆ. ಮಂಜಯ್ಯ ಹಾಗೂ ಕ್ರೀಡಾ ವಿಭಾಗದ ಸಂಚಾಲಕ ಡಾ.ಕೆ.ಆರ್. ಸುರೇಶ್ ಕುಮಾರ್ ಪ್ರಶಸ್ತಿ ಪತ್ರ ಹಾಗೂ ಪಾರಿತೋಷಕ ವಿತರಣೆ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-36-693783192

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.