ಕಲಬುರಗಿ: ಪ್ರಸಕ್ತ ಸಾಲಿನ ಕ್ರೀಡಾ ವಸತಿ ನಿಲಯಗಳಿಗೆ ನಡೆದ ಆಯ್ಕೆ ಪ್ರಕ್ರಿಯೆಯಿಂದ ಹೊರಗುಳಿದಿದ್ದ 8ನೇ ತರಗತಿ ಮತ್ತು ಪ್ರಥಮ ಪಿಯುಸಿ ಹಂತದಲ್ಲಿರುವ ಕ್ರೀಡಾಪಟುಗಳಿಗೆ ಮತ್ತೊಂದು ಅವಕಾಶ ಕಲ್ಪಿಸುವ ನಿಟ್ಟಿಲ್ಲಿ ಜೂನ್ 1ರಂದು ವಿಶೇಷ ಆಯ್ಕೆ ಪ್ರಕ್ರಿಯೆ ಆಯೋಜಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ವಿವರ: ಜೂನ್ 1ರಂದು ಬೆಳಗಾವಿ ಜಿಲ್ಲಾ ಕ್ರೀಡಾಂಗಣ– ವಾಲಿಬಾಲ್, ಸೈಕ್ಲಿಂಗ್, ಕುಸ್ತಿ, ಜೂಡೊ, ತುಮಕೂರ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ– ಅಥ್ಲೆಟಿಕ್ಸ್, ಕಬಡ್ಡಿ, ಜಿಮ್ನಾಸ್ಟಿಕ್ಸ್ , ಫುಟಬಾಲ್, ಬೆಂಗಳೂರಿನ ಕಂಠೀರವ ಕ್ರೀಡಾಂಗಣ–ಬ್ಯಾಸ್ಕೆಟ್ಬಾಲ್, ಬಾಕ್ಸಿಂಗ್, ಆರ್ಚರಿ, ಫೆನ್ಸಿಂಗ್, ಬೆಂಗಳೂರಿನ ಅಕ್ಕಿತಿಮ್ಮನಹಳ್ಳಿ ಹಾಕಿ ಕ್ರೀಡಾಂಗಣ–ಹಾಕಿ ಕ್ರೀಡಾಪಟುಗಳ ಅಯ್ಕೆ ಪ್ರಕ್ರಿಯೆ ಜರುಗಲಿದೆ. ಕ್ರೀಡಾಪಟುಗಳು ಬೆಳಿಗ್ಗೆ 9 ಗಂಟೆಗೆ ಮೂಲ ದಾಖಲೆಗಳೊಂದಿಗೆ ವರದಿ ಮಾಡಿಕೊಳ್ಳಬೇಕು.

ವಿಶೇಷ ಆಯ್ಕೆ ಪ್ರಕ್ರಿಯೆಯು 2 ಹಂತದಲ್ಲಿ ನಡೆಯಲಿದ್ದು, ತರಬೇತುದಾರರಿಂದ ಕ್ರೀಡಾವಾರು ಆಯ್ಕೆ ಪ್ರಕ್ರಿಯೆ ಹಾಗೂ ಕ್ರೀಡಾ ವಿಜ್ಞಾನ ಕೇಂದ್ರದಿಂದ ಕ್ರೀಡಾ ವೈಜ್ಞಾನಿಕ ಪರೀಕ್ಷೆ ಜರುಗಲಿದೆ. ರಾಜ್ಯದ ಎಲ್ಲೆಡೆಯ ಕ್ರೀಡಾಪಟುಗಳು ಮುಕ್ತವಾಗಿ ಭಾಗವಹಿಸಬಹುದು. 2026–27ನೇ ಸಾಲಿನ ಪ್ರವೇಶಕ್ಕೆ ಈಗಾಗಲೇ ಆಯೋಜಿಸಲಾಗಿದ್ದ ಆಯ್ಕೆ ಪ್ರಕ್ರಿಯೆಗಳಲ್ಲಿ ಭಾಗವಹಿಸಿದ್ದ ಅಭ್ಯರ್ಥಿಗಳೂ ಭಾಗವಹಿಸಬಹುದು.

ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿಯ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಖುದ್ಧಾಗಿ ಭೇಟಿ ನೀಡಿ ಅಥವಾ ವಾಟ್ಸ್ಆ್ಯಪ್ ಮೂಲಕ ಪಡೆಯಬಹುದು. ಹೆಚ್ಚಿನ ಮಾಹಿತಿಗೆ 9844029235 ಹಾಗೂ 7019167243 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-34-1911771625

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.