ಮಡಿಕೇರಿ: ಹತ್ತು ಕುಟುಂಬ ಹದಿನೆಂಟು ಗೋತ್ರದ ಗೌಡ ಕುಟುಂಬಗಳ ನಡುವೆ ನಡೆಯುತ್ತಿದ್ದ ಕ್ರಿಕೆಟ್ ಟೂರ್ನಿಯಲ್ಲಿ ಶನಿವಾರ ಪರ್ಲಕೋಟಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಫೈನಲ್ ಪಂದ್ಯದಲ್ಲಿ ಪರ್ಲಕೋಟಿ ತಂಡವು ಚೆರಿಯಮನೆ ತಂಡದ ವಿರುದ್ಧ ಜಯ ಸಾಧಿಸಿತು.

ಮೊದಲು ಬ್ಯಾಟ್ ಮಾಡಿದ ಚೆರಿಯಮನೆ ತಂಡವು ನಿಗದಿತ 6 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 38 ರನ್ ಗಳಿಸಿತು. ಗುರಿ ಬೆನ್ನತ್ತಿದ ಪರ್ಲಕೋಟಿ ತಂಡವು ಕೇವಲ 3.5 ಓವರ್ಗಳಲ್ಲಿ 1 ವಿಕೆಟ್ ಕಳೆದುಕೊಂಡು 41 ರನ್ಗಳಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು.

ಇದಕ್ಕೂ ಮುನ್ನ ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಮತ್ತು ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ ಅವರು ಮೈದಾನದಲ್ಲಿ ಬ್ಯಾಟ್ ಬೀಸುವ ಮೂಲಕ ಫೈನಲ್ ಪಂದ್ಯಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಪೊನ್ನಣ್ಣ, ‘ಗೌಡ ಯುವ ವೇದಿಕೆ ಈ ಒಂದು ಕ್ರಿಕೆಟ್ ಪಂದ್ಯಾವಳಿಯನ್ನು ಹಲವು ವರ್ಷದಿಂದ ಹಬ್ಬದ ರೀತಿಯಲ್ಲಿ ಆಚರಿಸಿಕೊಂಡು ಬರುತ್ತಿದೆ. ಈ ಬಾರಿಯೂ ಕ್ರೀಡಾಕೂಟ ಉತ್ತಮ ರೀತಿಯಲ್ಲಿ ಆಯೋಜನೆಗೊಂಡಿದೆ. ಕ್ರೀಡಾಕೂಟ ಆಯೋಜನೆ ಮಾಡುವುದು ಸುಲಭದ ಮಾತಲ್ಲ. ಅದರ ಹಿಂದೆ ಸಾಕಷ್ಟು ಜನರ ಪರಿಶ್ರಮ ಇದೆ’ ಎಂದು ಹೇಳಿದರು.

ಕ್ರೀಡಾ ಕ್ರೇತ್ರಕ್ಕೆ ಕೊಡಗಿನ ಕ್ರೀಡಾಪಟುಗಳ ಕೊಡುಗೆ ಬಹಳ ಅಪಾರ. ಗ್ರಾಮೀಣ ಪ್ರತಿಭೆಗಳನ್ನು ಹೊರ ತರಲು ಇದೊಂದು ಉತ್ತಮ ಅವಕಾಶ. ಜೊತೆಗೆ, ವಿವಿಧ ಕ್ರೀಡಾಕೂಟದಲ್ಲಿ ಕುಟುಂಬಗಳನ್ನು ಒಗ್ಗೂಡಿಸಲು ಇದೊಂದು ಉತ್ತಮ ವೇದಿಕೆ ಕೂಡ ಹೌದು ಎಂದರು.

‘ಕುಟುಂಬಗಳು ಮುಂದಿನ ದಿನಗಳಲ್ಲಿ ಹೆಚ್ಚಾಗಬೇಕು. ಕ್ರೀಡಾಕೂಟಕ್ಕೆ ನಮ್ಮ ಸಹಕಾರ ಕೂಡ ಇರಲಿದೆ. ಸರ್ಕಾರದ ಮಟ್ಟದಿಂದಲೂ ಸಹಕಾರ ತರಲು ನಾವು ಕೂಡ ಪಯತ್ನಪಡುತ್ತಿದೇವೆ. ಕ್ರೀಡಾಕೂಟ ಉತ್ತಮವಾಗಿ ಮೂಡಿ ಬಂದಿದೆ’ ಎಂದು ಶ್ಲಾಘಿಸಿದರು.

ಅರುಣ್ ಮಾಚಯ್ಯ ಮಾತನಾಡಿ, ಕೊಡಗು ಗೌಡ ಯುವ ವೇದಿಕೆಯ ವತಿಯಿಂದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಅದ್ದೂರಿ ಜಂಬರ ನಡೆಯುತ್ತಿದೆ. ಕೊಡಗಿಗೂ ಬೇರೆ ಜಿಲ್ಲೆಗಳ ಕ್ರೀಡಾಕೂಟಗಳಿಗೂ ಬಹಳ ವ್ಯತ್ಯಾಸ ಇದೆ. ಈ ಕ್ರೀಡಾಕೂಟವನ್ನ ಒಂದು ರೀತಿಯಲ್ಲಿ ಹಬ್ಬದಂತೆ ಆಚರಿಸುತ್ತಿರುವುದು ಬಹಳ ಖುಷಿಯ ವಿಚಾರ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-51-1745892057

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.