ಮಡಿಕೇರಿ: ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ಟೂರ್ನಿ’ ಯ ಪುರುಷರ ವಿಭಾಗದಲ್ಲಿ ಮಂಗಳವಾರ ಕ್ವಾರ್ಟರ್ ಫೈನಲ್ಸ್ ಪಂದ್ಯಗಳಲ್ಲಿ ಚೆಕ್ಕೇರ, ಪಂದ್ಯಂಡ, ಮಾಳೇಟಿರ ಹಾಗೂ ಪಾರುವಂಡ ತಂಡಗಳು ಗೆಲುವು ಸಾಧಿಸಿ ಸೆಮಿಫೈನಲ್ಸ್ ತಲುಪಿದವು.

ಮೈದಾನ 1 ಲಾಲು ಮುದ್ದಯ್ಯ ಮೈದಾನದಲ್ಲಿ ಚೆಕ್ಕೇರ ಮತ್ತು ಮಲ್ಲಜ್ಜಿರ ತಂಡಗಳ ನಡುವಿನ ಪಂದ್ಯದಲ್ಲಿ ಚೆಕ್ಕೇರ 64 ರನ್ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆಕ್ಕೇರ 8 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 100 ರನ್ಗಳಷ್ಟು ಬೃಹತ್ ಸ್ಕೋರ್ ಕಲೆಹಾಕಿತು. ಮಲ್ಲಜ್ಜಿರ 8 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 36 ರನ್ಗಳನ್ನಷ್ಟೇ ಗಳಿಸಿ ಟೂರ್ನಿಯಿಂದ ನಿರ್ಗಮಿಸಿತು. ಚೆಕ್ಕೇರ ಆಕರ್ಷ್ 47 ರನ್ಗಳನ್ನು ಗಳಿಸಿ ತಂಡದ ಗೆಲುವಿಗೆ ಸಹಕಾರಿಯಾದರು. ಮಲ್ಲಜ್ಜಿರ ಪರ ರೋಷನ್ 2 ವಿಕೆಟ್ ಪಡೆದು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಮೋಟನಾಳಿರ ಮತ್ತು ಪಂದ್ಯಂಡ ನಡುವಿನ ಪಂದ್ಯದಲ್ಲಿ ಪಂದ್ಯoಡ ತಂಡಕ್ಕೆ 7 ವಿಕೆಟ್ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮೋಟನಾಳಿರ 8 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 55 ರನ್ಗಳನ್ನು ಗಳಿಸಿತು. ಪಂದ್ಯಂಡ 4 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 59 ರನ್ ಗಳಿಸಿ ಗೆಲುವು ದಾಖಲಿಸಿತು. ಮೋಟನಾಳಿರ ಶರತ್ 25 ರನ್ ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಪಂದ್ಯಂಡ ಅಯ್ಯಪ್ಪ 18 ರನ್ ಗಳಿಸಿದರು.

ಮಾಳೇಟಿರ (ಕೆದಮುಳ್ಳೂರು) ಮತ್ತು ಅಳಮೇಂಗಡ ನಡುವಿನ ಪಂದ್ಯದಲ್ಲಿ ಮಾಳೇಟಿರ 40 ರನ್ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಾಳೇಟಿರ 8 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 95 ರನ್ ಗಳಿಸಿತು. ಅಳಮೇಂಗಡ 8 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 55 ರನ್ಗಳನ್ನು ಸೇರಿಸಿ ಸೋಲು ಕಂಡಿತು. ಮಾಳೇಟಿರ ರಿಷಬ್ 64 ರನ್ಗಳನ್ನು ಸೇರಿಸಿ ತಂಡದ ಗೆಲುವಿಗೆ ಸಹಕಾರಿಯಾದರು. ಅಳಮೇಂಗಡ ದಿಲೀಪ್ 34 ರನ್ಗಳನ್ನು ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅಳಮೇಂಗಡ ಪರ ಸೋಮಣ್ಣ 3 ವಿಕೆಟ್ ಪಡೆದರು.

ನೆರವಂಡ ಮತ್ತು ಪಾರುವಂಡ ನಡುವಿನ ಪಂದ್ಯದಲ್ಲಿ 8 ವಿಕೆಟ್ಗಳಿಂದ ಪಾರುವಂಡ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನೆರವಂಡ 8 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 77 ರನ್ ಗಳಿಸಿತು. ಪರುವಂಡ 5.5 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 78 ರನ್ಗಳನ್ನು ಗಳಿಸಿ ಗೆಲುವು ಪಡೆಯಿತು. ಪ್ರವೀಣ್ 35 ರನ್ಗಳನ್ನು ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಪಾರುವಂಡ ಪ್ರಿನ್ಸ್ 59 ರನ್ ಗಳಿಸಿ ತಂಡದ ಗೆಲುವಿಗೆ ಸಹಕಾರಿಯಾದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-51-1182779744

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.