ನಾಪೋಕ್ಲು: ‘ಕೊಡಗು ಜಿಲ್ಲೆಯು ಕಾಫಿಗೆ ಹೇಗೆ ಪ್ರಸಿದ್ಧವೋ ಹಾಗೆಯೇ ಹಾಕಿ ಕ್ರೀಡೆಗೆ ಪ್ರಸಿದ್ಧಿ. ಹಾಕಿ ರಾಷ್ಟ್ರೀಯ ಕ್ರೀಡೆಯಾದರೂ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿಲ್ಲ’ ಎಂದು ಕೊಡಗು ಜಿಲ್ಲಾ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಸಮೀಪದ ಬಲ್ಲಮಾವಟಿ ಗ್ರಾಮದ ನೇತಾಜಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಆಯೋಜಿಸಿದ್ದ ನಾಲ್ನಾಡ್ ಅಂತರ ಗ್ರಾಮ ಹಾಕಿ ಟೂರ್ನಿ ಹಾಗೂ ಮಹಿಳಾ ಹಗ್ಗ ಜಗ್ಗಾಟದ ಉತ್ಸವವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಜಿಲ್ಲೆ ಹಾಗೂ ಪಂಜಾಬ್ ರಾಜ್ಯ ಹಲವು ಕ್ರೀಡಾಪಟುಗಳನ್ನು ಕ್ರೀಡಾಕ್ಷೇತ್ರಕ್ಕೆ ಕೊಡುಗೆಯಾಗಿ ನೀಡಿದ್ದು, ಹಾಕಿಯನ್ನು ಉತ್ತೇಜಿಸುವ ಉದ್ದೇಶದಿಂದ ಕ್ರೀಡಾಪಟುಗಳಿಗೆ ವಿವಿಧ ಸಂಘ-ಸಂಸ್ಥೆಗಳು ಕ್ಲಬ್ಗಳು ತರಬೇತಿ ನೀಡುತ್ತಿರುವುದು ಶ್ಲಾಘನೀಯ’ ಎಂದರು.

ಕೊಡಗು ಜಿಲ್ಲಾ ಡಿಸಿಸಿ ಬ್ಯಾಂಕ್ ಸಿಇಒ ಮಣವಟ್ಟಿರ ಜಯ ಕುಶಾಲಪ್ಪ ಮಾತನಾಡಿ, ‘ಜಿಲ್ಲೆ ಕ್ರೀಡೆಗೆ ಹೆಸರುವಾಸಿಯಾಗಿದ್ದು, ಕ್ರೀಡೆಯೊಂದಿಗೆ ಜನರ ಶಿಸ್ತು, ಅತಿಥಿ ಸತ್ಕಾರ ಎಲ್ಲವೂ ವಿಶ್ವಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ. ಜಿಲ್ಲೆಯ ವಿಭಿನ್ನ ಸಂಸ್ಕೃತಿ, ನಡವಳಿಕೆ ಹಾಗೂ ಶಿಸ್ತು ರಾಷ್ಟ್ರಮಟ್ಟದಲ್ಲಿ ಖ್ಯಾತಿಗಳಿಸಿದೆ. ಇದನ್ನು ಉಳಿಸಿ ಬೆಳೆಸುವಂತಹ ಜವಾಬ್ದಾರಿ ನಮ್ಮ ಮೇಲಿದೆ’ ಎಂದರು.

‘ಇತ್ತೀಚಿನ ವರ್ಷಗಳಲ್ಲಿ ಜಿಲ್ಲೆಯಿಂದ ರಾಷ್ಟ್ರಮಟ್ಟಕ್ಕೆ ಹೋಗುವ ಕ್ರೀಡಾಪಟುಗಳ ಸಂಖ್ಯೆ ಕಡಿಮೆಯಾಗಿದ್ದು, ಇತರ ರಾಜ್ಯಗಳಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ದೊರಕುತ್ತಿದೆ. ಇಂತಹ ಟೂರ್ನಿಗಳ ಮೂಲಕ ಕ್ರೀಡಾಪಟುಗಳು ಉತ್ತಮ ತರಬೇತಿಯನ್ನು ಹೊಂದುವ ಮೂಲಕ ಜಿಲ್ಲೆಯಿಂದ ಕನಿಷ್ಠ 10 ಮಂದಿ ಕ್ರೀಡಾಪಟುಗಳು ಮೇಲ್ಮಟ್ಟಕ್ಕೆ ಹೋಗು ವಂತಾಗಬೇಕು’ ಎಂದು ಹಾರೈಸಿದರು.

ಟೂರ್ನಿಯ ಸಂಚಾಲಕ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ‘ಕೆಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಟೂರ್ನಿಯನ್ನು ಕಳೆದ ವರ್ಷ ಪುನರಾರಂಭಿಸಿ ಯಶಸ್ವಿಯಾಗಿ ಟೂರ್ನಿಯನ್ನು ನಡೆಸಿದ್ದು, ಈ ವರ್ಷ ಉದ್ಯಮಿ ಎಡಿಕೇರಿ ಪ್ರಸನ್ನ ಅವರು ₹3 ಲಕ್ಷ ನೀಡಿದ್ದು, ಅವರ ಪ್ರಾಯೋಜಕತ್ವದಲ್ಲಿ ಟೂರ್ನಿಯನ್ನು ಆಯೋಜಿಸಲಾಗುತ್ತಿದೆ’ ಎಂದು ಹೇಳಿದರು.

ನಾಲ್ನಾಡು ಹಾಕಿ ಕ್ಲಬ್ ಅಧ್ಯಕ್ಷ ಕರವಂಡ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಸಮಾರಂಭ ನಡೆಯಿತು. ಉಪಾಧ್ಯಕ್ಷ ಕೈಬಿಲಿರಾ ಉಮೇಶ್ ಉತ್ತಪ್ಪ, ಕಾರ್ಯದರ್ಶಿ ಚಂಗೇಟಿರ ಕುಮಾರ್ ಸೋಮಣ್ಣ, ಖಜಾಂಜಿ ಚೀಯಂಡಿ ದಿನೇಶ್, ಸಹ ಕಾರ್ಯದರ್ಶಿ ಮಚ್ಚುರ ಯದುಕುಮಾರ್, ಹೊಸೊಕ್ಲು ಮಾಚಯ್ಯ ಉಪಸ್ಥಿತರಿದ್ದರು..

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-51-1914398148

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.