ಮಡಿಕೇರಿ: ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ವತಿಯಿಂದ ಇಲ್ಲಿನ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ 2 ದಿನಗಳ 10ನೇ ವರ್ಷದ ರಾಜ್ಯಮಟ್ಟದ ‘ಮೊಗೇರ ಕ್ರೀಡಾಕೂಟ’ ಆರಂಭವಾಯಿತು.

ಕೊಡಗು, ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಂದ ಕ್ರೀಡಾಪಟುಗಳು ಇದರಲ್ಲಿ ಭಾಗವಹಿಸಿದ್ದಾರೆ. ಮೊದಲ ದಿನ ನಡೆದ ಕ್ರಿಕೆಟ್ ಪಂದ್ಯಗಳಲ್ಲಿ 40ಕ್ಕೂ ಅಧಿಕ ತಂಡಗಳು ಭಾಗವಹಿಸಿದ್ದವು. ಹೊನಲು ಬೆಳಕಿನ ಕಬಡ್ಡಿ ಟೂರ್ನಿಯಲ್ಲಿ 17 ತಂಡಗಳು ಭಾಗವಹಿಸಿದ್ದವು.

ಭಾನುವಾರ ವಾಲಿಬಾಲ್, ಥ್ರೋಬಾಲ್, ಹಗ್ಗಜಗ್ಗಾಟ ಮತ್ತಿತರ ಕ್ರೀಡೆಗಳು ನಡೆಯಲಿವೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕ್ರೀಡಾಕೂಟ ಉದ್ಘಾಟಿಸಿದ ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ಅಧ್ಯಕ್ಷ ಪಿ.ಬಿ.ಜನಾರ್ದನ ಮಾತನಾಡಿ, ‘ಮೊಗೇರ ಸಮಾಜದವರನ್ನು ಒಗ್ಗೂಡಿಸುವ ಸಲುವಾಗಿ 10 ವರ್ಷಗಳಿಂದ ಕೇವಲ ಕೊಡಗು ಮಾತ್ರವಲ್ಲ ಹೊರ ಜಿಲ್ಲೆಗಳಲ್ಲಿನ ಮೊಗೇರ ಸಮಾಜ ಬಾಂಧವರನ್ನೂ ಒಳಗೊಂಡಂತೆ ಕ್ರೀಡಾಕೂಟ ಆಯೋಜಿಸಿಕೊಂಡು ಬರಲಾಗುತ್ತಿದೆ. ಇದು ಕೇವಲ ಸಂಘಟನೆಗೆ ಮಾತ್ರವಲ್ಲ, ಕ್ರೀಡಾ ಪ್ರತಿಭೆಗಳ ಉತ್ತೇಜನಕ್ಕೂ ಕಾರಣವಾಗಿದೆ’ ಎಂದು ಹೇಳಿದರು.

ಮಡಿಕೇರಿ ನಗರಸಭಾ ಅಧ್ಯಕ್ಷೆ ಪಿ.ಕಲಾವತಿ ಮಾತನಾಡಿ, ‘ರಾಜ್ಯದ ವಿವಿಧೆಡೆಗಳಿಂದ ಮೊಗೇರ ಸಮಾಜ ಬಾಂಧವರು ಕ್ರೀಡಾಕೂಟದಲ್ಲಿ ಒಂದೆಡೆ ಸೇರಿರುವುದು ಸಂತಸ ತರಿಸಿದೆ’ ಎಂದರು. ಸಮಾಜದ ಕ್ರೀಡಾಧ್ಯಕ್ಷ ಎಂ.ಜಿ.ಚಂದ್ರ ಮಾತನಾಡಿ, ‘2 ದಿನಗಳ ಕಾಲ ಕ್ರಿಕೆಟ್ ಸೇರಿದಂತೆ ವೈವಿಧ್ಯಮಯವಾದ ಸ್ಪರ್ಧಾ ಕಾರ್ಯಕ್ರಮಗಳು ನಡೆಯಲಿವೆ’ ಎಂದು ಹೇಳಿದರು.

ಮೊಗೇರ ಸಮಾಜ ಸೇವಾ ಸಂಘದ ಲಾಂಛನವನ್ನು ಹೊಂದಿದ ಕ್ರೀಡಾ ಧ್ವಜಾರೋಹಣಗೊಂಡಿತು.

ಸಂಘದ ಜಿಲ್ಲಾ ಗೌರವ ಸಲಹೆಗಾರ ಪಿ.ಎಂ.ರವಿ, ಕ್ರೀಡಾ ಕಾರ್ಯದರ್ಶಿ ಪಿ.ಸಿ.ರಮೇಶ್, ಜಿಲ್ಲಾ ಉಪಾಧ್ಯಕ್ಷ ಬಿ.ಎಂ.ದಾಮೋದರ, ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಸಿ.ರಘು, ವಿರಾಜಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ರಾಮು ಹಾಗೂ ಜಿಲ್ಲಾ ಪದಾಧಿಕಾರಿಗಳು ಭಾಗಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-51-546155143

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.