ನಾಪೋಕ್ಲು: ಎಳಿರಾ..ಬಲಿರಾ.. ಎಂಬ ಉದ್ಗೋಷಗಳು ಕಿಕ್ಕಿರಿದ ವೀಕ್ಷಕರ ಕರತಾಡನದ ನಡುವೆ ಮೈದಾನದಲ್ಲಿ ಅನುರಣಿಸಿದವು.

ಸ್ಥಳೀಯ ಕೆಪಿಎಸ್ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ಚೀಯಕಪೂವಂಡ ಕುಟುಂಬದವರು ಆಯೋಜಿಸಿದ್ದ 5ನೇ ವರ್ಷದ ಕೊಡವ ಕೌಟುಂಬಿಕ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪುರುಷರ ವಿಭಾಗದಲ್ಲಿ 89 ತಂಡಗಳು ಹಾಗೂ ಮಹಿಳಾ ವಿಭಾಗದಲ್ಲಿ 31 ತಂಡಗಳು ಮುಂದಿನ ಸುತ್ತಿಗೆ ಪ್ರವೇಶ ಪಡೆದಿದೆ.

ಪಂದ್ಯದ ವೀಕ್ಷಕ ವಿವರಣೆಗಾರರಾಗಿ ಬಾಳೆಯಡ ದಿವ್ಯ ಮಂದಪ್ಪ, ತೀರ್ಪುಗಾರರಾಗಿ ಕೊಡವ ಟಗ್ ಆಫ್ ವಾರ್ ಅಕಾಡೆಮಿಯ ಸದಸ್ಯರು ಕಾರ್ಯನಿರ್ವಹಿಸಿದರು. ಕುತೂಹಲದ ಪಂದ್ಯಗಳನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ನೆರೆದಿದ್ದರು. ಗುಡುಗು ಸಿಡಿಲಿನ ಅಬ್ಬರ ಜೋರಾಗಿದ್ದಿದರಿಂದ ಎಲ್ಲರೂ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ, ಮಳೆ ಬಾರದೆ ಎಲ್ಲ ಪಂದ್ಯಗಳು ಸುಗಮವಾಗಿ ನಡೆಯುವಂತಾಯಿತು.

ಚೀಯಕಪೂವಂಡ ಹಗ್ಗಜಗ್ಗಾಟ ಟೂರ್ನಿಯ ಕುಟುಂಬದ ಹಾಡನ್ನು ಹಾಡಿದ ಮಚ್ಚಂಡ ಶರಣ್ ಪರವಾಗಿ ಅವರ ಪೋಷಕರನ್ನು ಚೀಯಕಪೂವಂಡ ಸ್ಪೋಟ್ಸ್ ಅಧ್ಯಕ್ಷ ಸಿ.ಕೆ. ಬೋಪಣ್ಣ ಹಾಗೂ ಸಿ.ಕೆ. ಅಪ್ಪಚ್ಚು, ಟಗ್ ಆಫ್ ವಾರ್ ಅಕಾಡೆಮಿ ಅಧ್ಯಕ್ಷ ಪೊನ್ನಾಲ್ ತಂಡ ಕಿರಣ್ ಪೊನ್ನಪ್ಪ ಸನ್ಮಾನಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-51-1878106444

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.