ಸೋಮವಾರಪೇಟೆ: ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಸಿಂಥೆಟಿಕ್ ಟರ್ಫ್ ಮೈದಾನದಲ್ಲಿ ಮೇ 7 ರಿಂದ 10ರವರೆಗೆ ಆಯೋಜಿಸಿರುವ ರಾಜ್ಯಮಟ್ಟದ ಯಿಫಾ ಹಾಕಿ ಚಾಂಪಿಯನ್ಸ್ ಟ್ರೋಫಿ ಕ್ರೀಡಾಕೂಟದ ಟೈಸ್ ಅನ್ನು ಮಾಜಿ ಕ್ರೀಡಾ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಭಾನುವಾರ ಬಿಡುಗಡೆಗೊಳಿಸಿದರು.

ತಮ್ಮ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಟೈಸ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕೊಡಗಿನ ಮಣ್ಣಿನಲ್ಲಿ ಕ್ರೀಡೆ ಅಡಗಿದೆ. ಈ ಭೂಮಿ ನಿಸರ್ಗದ ಸೃಷ್ಟಿಯ ಸೊಬಗು. ಪ್ರಪಂಚದ ಯಾವುದೇ ಮೂಲೆಗೆ ಹೋದರೂ ಕೊಡಗಿನಂತಹ ವಾತಾವರಣ ಸಿಗುವುದಿಲ್ಲ. ಇಲ್ಲಿ ಸಾಕಷ್ಟು ಕ್ರೀಡಾಪಟುಗಳು ದೇಶ ವಿದೇಶಗಳಲ್ಲಿ ದೇಶಕ್ಕೆ ಹೆಸರನ್ನು ತಂದಿದ್ದಾರೆ. ಇನ್ನೂ ಹೆಚ್ಚಿನ ಕ್ರೀಡಾಪಟುಗಳು ದೇಶಕ್ಕೆ ಹೆಸರನ್ನು ತರಬೇಕೆಂದರು.

ಅಧ್ಯಕ್ಷತೆ ವಹಿಸಿದ್ದ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ ಮಾತನಾಡಿ, ಜಿಲ್ಲೆಯಲ್ಲಿ 25 ವರ್ಷಗಳ ನಂತರ ರಾಜ್ಯಮಟ್ಟದ ಹಾಕಿ ಟೂರ್ನಿ ಆಯೋಜಿಸಲಾಗಿದೆ. ಪಂದ್ಯಾಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮುವ ತಂಡಕ್ಕೆ ₹2 ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ ₹1 ಲಕ್ಷ ನಗದು ಹಾಗೂ ಟ್ರೋಫಿ, ತೃತೀಯ ಸ್ಥಾನ ಪಡೆಯುವ ತಂಡಕ್ಕೆ ₹50 ಸಾವಿರ ನಗದು ಹಾಗೂ ಟ್ರೋಫಿ ನೀಡಲಾಗುವುದು. ಇದರೊಂದಿಗೆ ವೈಯಕ್ತಿಕ ವಿಭಾಗದಲ್ಲಿಯೂ ಪ್ರಶಸ್ತಿಗಳನ್ನು ವಿತರಿಸಲಾಗುವುದು ಎಂದರು.

ಯಿಫಾ ಸಂಘಟನೆಯ ಉಪಾಧ್ಯಕ್ಷ ಹರ್ಷಿತ್ ಶಿವಪ್ಪ, ಕಾರ್ಯದರ್ಶಿ ಸಜನ್ ಮಂದಣ್ಣ, ಖಜಾಂಚಿ ಮೋಹಿತ್ ತಿಮ್ಮಯ್ಯ ಸೇರಿ ಪದಾಧಿಕಾರಿಗಳು, ಮಹಿಳಾ ಘಟಕದ ಸದಸ್ಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-51-1525837625

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.