ಮಡಿಕೇರಿ: ಕೊಡವ ಕುಟುಂಬಗಳ ನಡುವಿನ 24ನೇ ವರ್ಷದ ’ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್‘ ಟೂರ್ನಿ ಶುಕ್ರವಾರ ಮೂರ್ನಾಡು ಗ್ರಾಮದಲ್ಲಿ ಆರಂಭಗೊಂಡಿತು. ಒಟ್ಟು 289 ತಂಡಗಳು ಪ್ರಶಸ್ತಿಗಾಗಿ ಸೆಣಸಾಟ ನಡೆಸಲಿವೆ. ಮೇ 1ರವರೆಗೂ ಇಲ್ಲಿ ಪಂದ್ಯಗಳು ನಡೆಯಲಿವೆ.

ಮೂರ್ನಾಡುವಿನ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ, ಅರಮೇರಿ ಕಳಂಚೇರಿ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಕ್ರೀಡಾಕೂಟದ ಅಧ್ಯಕ್ಷ ಮುಕ್ಕಾಟಿರ ಸುರೇಶ್ ಪೆಮ್ಮಯ್ಯ ಕೊಡವ ಕ್ರಿಕೆಟ್ ಅಸೋಷಿಯೇಷನ್ನ ಧ್ವಜಾರೋಹಣ ನೆರವೇರಿಸಿದರು.

ಅಸೋಸಿಯೇಷನ್ ಅಧ್ಯಕ್ಷ ಕೀತಿಯಂಡ ಕಾರ್ಸನ್ ಕಾರ್ಯಪ್ಪ ಅವರು ಬೆಳ್ಳಿಯ ಬ್ಯಾಟ್ನಿಂದ ಬಾಲ್ ಅನ್ನು ಹೊಡೆಯುವ ಮೂಲಕ ಕ್ರಿಕೆಟ್ ಉತ್ಸವಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಚೆಪ್ಪುಡಿರ ಅರುಣ್ ಮಾಚಯ್ಯ, ’ಕೇಂದ್ರ ಸರ್ಕಾರ ದೇಶದಲ್ಲಿ 10 ಕ್ರೀಡಾ ಜಿಲ್ಲೆಗಳನ್ನು ಗುರುತಿಸಿದೆ. ಇದರಲ್ಲಿ ಕೊಡಗು ಸ್ಥಾನ ಪಡೆಯುವ ಮೂಲಕ ದಕ್ಷಿಣ ಭಾರತದ ಪ್ರಥಮ ಕ್ರೀಡಾ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಅರ್ಜುನ ಪ್ರಶಸ್ತಿಗೆ ಆಯ್ಕೆಯಾಗಿರುವ ರಾಜ್ಯದ 17 ಮಂದಿಯ ಪೈಕಿ 9 ಮಂದಿ ಕೊಡಗು ಜಿಲ್ಲೆಯವರು ಎಂಬುದು ವಿಶೇಷ‘ ಎಂದು ಹೇಳಿದರು.

ಸಮುದಾಯಗಳಲ್ಲಿ ಸಂಘಟನೆ ಇದ್ದಾಗ ಮಾತ್ರವೇ ಕ್ರೀಡಾ ಕ್ಷೇತ್ರ ಬೆಳವಣಿಗೆ ಕಾಣಲು ಸಾಧ್ಯ. ವಿವಿಧ ಕ್ರೀಡಾ ಸಂಸ್ಥೆಗಳು ಸರ್ಕಾರದ ಮಾನ್ಯತೆ ಪಡೆದಾಗ ಮಾತ್ರವೇ ಸೌಲಭ್ಯಗಳು ದೊರೆಯುತ್ತದೆ ಎಂದು ಹೇಳಿದರು.

ಕೊಡಗು ಜಿಲ್ಲೆಯಲ್ಲಿ ಕ್ರೀಡೆಗೆ ಉತ್ತೇಜನ ನೀಡುವ ಮೂಲಸೌಕರ್ಯಗಳ ಕೊರತೆ ಇದ್ದು, ಅದರ ನಿವಾರಣೆಗೆ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದರು.

ಕೊಡವ ಕ್ರಿಕೆಟ್ ಅಸೋಸಿಯೇಷನ್ ಸಹಯೋಗದೊಂದಿಗೆ ಕಳೆದ 23 ವರ್ಷಗಳಿಂದ ನಿರಂತರವಾಗಿ ಕೊಡವ ಕ್ರಿಕೆಟ್ ಉತ್ಸವವನ್ನು ಆಯೋಜಿಸಿಕೊಂಡು ಬಂದ 23 ಕುಟುಂಬಗಳಿಗೆ ಇದೇ ವೇಳೆ ಗೌರವಿಸಲಾಯಿತು.

ಮೂರ್ನಾಡು ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ವತಿಯಿಂದ ಉಮ್ಮತ್ತಾಟ್ ಪ್ರದರ್ಶನ ನೋಡುಗರ ಗಮನ ಸೆಳೆಯಿತು. ನಾರ್ಥ್ ಕೂರ್ಗ್ ಮತ್ತು ಸೌತ್ ಕೂರ್ಗ್ ತಂಡಗಳ ನಡುವೆ ನಡೆದ ಪ್ರದರ್ಶನ ಪಂದ್ಯ ನಡೆಯಿತು.

ಉದ್ಯಮಿ ಮಾಚೆಟ್ಟಿರ ಜಿನಿತ್ ಅಯ್ಯಪ್ಪ, ಮಣವಟ್ಟಿರ ಮಧು ಬೋಪಣ್ಣ, ಪೊಲೀಸ್ ಅಧಿಕಾರಿ ಪಟ್ರಪಂಡ ಪೊನ್ನಪ್ಪ, ಮೂರ್ನಾಡು ವಿದ್ಯಾ ಸಂಸ್ಥೆಯ ಪೆಮ್ಮುಡಿಯಂಡ ವೇಣು ಭಾಗವಹಿಸಿದ್ದರು.

ಇದಕ್ಕೂ ಮುನ್ನ ಮುಕ್ಕಾಟಿರ ಕುಟುಂಬದ ಬೇತ್ರಿ ಐನ್ಮನೆಯಲ್ಲಿ ಗುರುಕಾರೋಣರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಮೂರ್ನಾಡು ಗ್ರಾಮಕ್ಕೆ ಬಂದು ಮುಕ್ಕಾಟಿರ ಕ್ರಿಕೆಟ್ ಉತ್ಸವದ ಲಾಂಛನ ಹಿಡಿದು, ದುಡಿಕೊಟ್ ಪಾಟ್, ತಳಿಯ ತಕ್ಕಿ ಬೊಳ್ಚ, ಕೊಡಗಿನ ಸಾಂಪ್ರದಾಯಿಕ ವಾಲಗದೊಂದಿಗೆ ಮುಕ್ಕಾಟಿರ ಕುಟುಂಬಸ್ಥರು ಮೈದಾನದವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದರು. ಮುಕ್ಕಾಟಿರ ಹಿತೈಶಿ ನಾಣಯ್ಯ ಅವರ ಸ್ವಾಗತ ನೃತ್ಯ ಗಮನ ಸೆಳೆಯಿತು.

'ಹಿರಿಯರ ಕಾರ್ಯ ಸ್ಮರಿಸಿ'

ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, 'ಕೊಡಗು ಜಿಲ್ಲೆಯಲ್ಲಿ ಶತಮಾನಗಳ ಹಿಂದೆ ಹಿರಿಯರು ಶಾಲೆಗಳ ಜೊತೆಗೆ ಸುಸಜ್ಜಿತ ಮೈದಾನಗಳನ್ನೂ ನಿರ್ಮಿಸಿದ್ದರು. ಆ ಹಿರಿಯರ ಪ್ರೋತ್ಸಾಹ ಮತ್ತು ಪ್ರೇರಣೆಗಳಿಂದ ಕ್ರೀಡಾಪಟುಗಳಾಗಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತಿದೆ. ಎಲ್ಲಾ ಕ್ರೀಡಾಪಟುಗಳು ಮತ್ತು ಕ್ರೀಡಾಸಕ್ತರು ಹಿರಿಯರ ಈ ಕಾರ್ಯವನ್ನು ಸ್ಮರಿಸಬೇಕು ಎಂದು ಹೇಳಿದರು.
ಪ್ರತಿಭೆಗಳನ್ನು ಹೊರತರಲು ಕ್ರೀಡಾಕೂಟಗಳು ನಡೆಯುತ್ತಿರಬೇಕು. ಇಂತಹ ಕ್ರೀಡಾ ಕೂಟಗಳ ಜೊತೆಯಲ್ಲಿಯೇ ನಮ್ಮ ಸಂಸ್ಕೃತಿ, ಪದ್ದತಿ, ಪರಂಪರೆ, ಆಚರಣೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ಸಾಧ್ಯವಾಗುತ್ತದೆ ತಿಳಿಸಿದರು.

ಕೊಡವ ಹಾಕಿಗೆ ಸರ್ಕಾರ ಅನುದಾನ ನೀಡುತ್ತಿದೆ, ಕೊಡವ ಕ್ರಿಕೆಟ್ಗೂ ಅನುದಾನ ಒದಗಿಸುವಂತೆ ಶಾಸಕರ ಮೂಲಕ ಮುಕ್ಕಾಟಿರ ಕುಟುಂಬಸ್ಥರು ಮನವಿ ಸಲ್ಲಿಸಿದಲ್ಲಿ ಅನುದಾನ ಪಡೆಯಲು ಸಾಧ್ಯವಾಗಬಹುದು.
ಬಾಳೆಯಡ ಕರುಣ ಕಾಳಪ್ಪ ಹಿರಿಯ ಹಾಕಿ ಕ್ರೀಡಾಪಟು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-51-2028623914

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.