ಗೋಣಿಕೊಪ್ಪಲು: ಕೊಡವ ಟಗ್ ಆಫ್ ವಾರ್ ಅಕಾಡೆಮಿ ಹಾಗೂ ಪ್ರಸಕ್ತ ಸಾಲಿನ ಕೊಡವ ಒಕ್ಕಡೊಕ್ಕಡ ಕೇರ್ ಬಲಿ ನಮ್ಮೆಯ ಆಯೋಜಕರಾದ ಚೀಯಕಪೂವಂಡ ಕುಟುಂಬದ ನಮ್ಮೆ ಸಮಿತಿ ಸದಸ್ಯರ ಜಂಟಿ ಸಭೆ ಭಾನುವಾರ ಪಟ್ಟಣದಲ್ಲಿ ನಡೆಯಿತು.

ಕೊಡವ ಟಗ್ ಆಫ್ ವಾರ್ ಅಕಾಡೆಮಿ ಅಧ್ಯಕ್ಷ ಪೊನ್ನೊಲತಂಡ ಕಿರಣ್ ಪೊನ್ನಪ್ಪ ಅಧ್ಯಕ್ಷತೆ ವಹಿಸಿದ್ದರು.

5ನೇ ವರ್ಷದ ಚೀಯಕಪೂವಂಡ ಕಪ್ ಕೇರ್ ಬಲಿ ನಮ್ಮೆ ಏಪ್ರಿಲ್ 23ರಿಂದ 26ರವರೆಗೆ ನಾಪೋಕ್ಲು ಸರ್ಕಾರಿ ಪಿಯು ಕಾಲೇಜು ಮೈದಾನದಲ್ಲಿ ನಡೆಯಲಿದೆ. ಇದರ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಆಯೋಜಕರು ಮನವಿ ಮಾಡಿಕೊಂಡರು.

ಸಭೆಯಲ್ಲಿ ಮೈದಾನದ ಸಿದ್ಧತೆ, ಗ್ಯಾಲರಿ ವ್ಯವಸ್ಥೆ, ವೇದಿಕೆಯ ನಿರ್ಮಾಣ, ತಾಂತ್ರಿಕ ವ್ಯವಸ್ಥೆ, ತಾಂತ್ರಿಕ ಹಾಗೂ ಇತರ ಸಮಿತಿಗಳ ಜವಾಬ್ದಾರಿ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.

ಪುರುಷರ, ಮಹಿಳೆಯರ ಹಾಗೂ 16 ವರ್ಷದೊಳಗಿನ ಮಕ್ಕಳ ವಿಭಾಗದಲ್ಲಿ ನಡೆಯುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ವಿಭಾಗವಾರು ಪ್ರಥಮ, ದ್ವಿತೀಯ, ತ್ರತೀಯ, ಚತುರ್ಥ ಬಹುಮಾನವಲ್ಲದೆ ಈ ಬಾರಿ 5ನೆ ಹಾಗೂ 6ನೆ ಬಹುಮಾನ ನೀಡಲಾಗುವುದು ಎಂದು ಸಂಚಾಲಕ ಬೋಪಣ್ಣ ಹೇಳಿದರು.

300ಕ್ಕೂ ಹೆಚ್ಚು ಕೊಡವ ಕುಟುಂಬ ತಂಡಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-51-1343417721

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.